Advertisement

ಶೀಘ್ರವೇ BJP ಸೇರ್ಪಡೆ; ಕ್ಯಾ.ಅಮರೀಂದರ್ ಸಿಂಗ್ NDA ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ?

05:07 PM Jul 02, 2022 | Team Udayavani |

ನವದೆಹಲಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಜುಲೈ ತಿಂಗಳಲ್ಲಿ ಬಿಜೆಪಿ ಸೇರ್ಪಡೆಗೊಳ್ಳುವ ಸಾಧ್ಯತೆ ಇದ್ದಿರುವುದಾಗಿ ಊಹಾಪೋಹ ಹರಿದಾಡುತ್ತಿದೆ. ಬಿಜೆಪಿ ಮೂಲಗಳ ಪ್ರಕಾರ, ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರನ್ನು ಉಪರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯನ್ನಾಗಿ ಮಾಡುವ ಸಾಧ್ಯತೆ ಇದೆ ಎಂದು ತಿಳಿಸಿವೆ.

Advertisement

ಇದನ್ನೂ ಓದಿ:ಸಿಎಂ ಅಭ್ಯರ್ಥಿಗಳನ್ನು ಘೋಷಿಸಿ: ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಸಿ.ಎಂ.ಇಬ್ರಾಹಿಂ ಸವಾಲು

ಅಮರೀಂದರ್ ಸಿಂಗ್ ಅವರು ಲಂಡನ್ ನಲ್ಲಿ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಕೇಸರಿ ಪಕ್ಷದ ಮೂಲಗಳ ಮಾಹಿತಿ ಪ್ರಕಾರ, ಕೆಲವು ವಾರಗಳ ನಂತರ ಕ್ಯಾಪ್ಟನ್ ಸಿಂಗ್ ಲಂಡನ್ ನಿಂದ ಪಂಜಾಬ್ ಗೆ ವಾಪಸ್ ಆದ ನಂತರ ಅವರ ಪಂಜಾಬ್ ಲೋಕ್ ಕಾಂಗ್ರೆಸ್ ಪಕ್ಷ ಬಿಜೆಪಿ ಜತೆ ವಿಲೀನಗೊಳಿಸುವ ಪ್ರಕ್ರಿಯೆ ಆರಂಭವಾಗಲಿದೆ.

ಒಂದು ವೇಳೆ ಅಮರೀಂದರ್ ಸಿಂಗ್ ಅವರನ್ನು ಉಪರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಎಂದು ಘೋಷಿಸಿದಲ್ಲಿ, ಸಿಂಗ್ ಪತ್ನಿ ಪ್ರಣೀತ್ ಕೌರ್ ನೇತೃತ್ವದಲ್ಲಿ ಪಕ್ಷದ ವಿಲೀನ ಪ್ರಕ್ರಿಯೆ ನಡೆಯಲಿದೆ. ಪಟಿಯಾಲಾ ಸಂಸದರಾಗಿರುವ ಕೌರ್ ಈಗ ಕಾಂಗ್ರೆಸ್ ಪಕ್ಷದಲ್ಲಿದ್ದಾರೆ.

ಆಗಸ್ಟ್ 6ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ಉಪರಾಷ್ಟ್ರಪತಿ ಚುನಾವಣೆ ಕುರಿತು ಜುಲೈ 5ರಂದು ಅಧಿಕೃತವಾಗಿ ಪ್ರಕಟಣೆ ಹೊರಡಿಸಲಿದೆ. ಜುಲೈ 19 ಅಭ್ಯರ್ಥಿ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜುಲೈ 20ರಂದು ನಾಮಪತ್ರ ಪರಿಶೀಲನೆ, ಜುಲೈ 22 ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಜುಲೈ ಎರಡನೇ ವಾರದಲ್ಲಿ ಉಪ ರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಎನ್ ಡಿಎ ಮೈತ್ರಿಕೂಟ ಘೋಷಿಸಲಿದೆ. ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್ 10ಕ್ಕೆ ಮುಕ್ತಾಯಗೊಳ್ಳಲಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next