Advertisement

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ಅಮರಿಂದರ್, ಸುನೀಲ್ ಜಾಖರ್

03:58 PM Dec 02, 2022 | Team Udayavani |

ನವದೆಹಲಿ : ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮತ್ತು ಸುನೀಲ್ ಜಾಖರ್ ಹಾಗೂ ಉತ್ತರ ಪ್ರದೇಶದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರನ್ನು ಬಿಜೆಪಿ ಶುಕ್ರವಾರ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರನ್ನಾಗಿ ನೇಮಿಸಿದೆ.

Advertisement

ಮಾಜಿ ಕಾಂಗ್ರೆಸ್ ವಕ್ತಾರ ಜೈವೀರ್ ಶೆರ್ಗಿಲ್ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಲಾಗಿದೆ ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ.

ಮದನ್ ಕೌಶಿಕ್, ವಿಷ್ಣು ದೇವ ಸಾಯಿ, ಕ್ರಮವಾಗಿ ಉತ್ತರಾಖಂಡ ಮತ್ತು ಛತ್ತೀಸ್‌ಗಢದ ಅದರ ಮಾಜಿ ಅಧ್ಯಕ್ಷರು, ರಾಣಾ ಗುರ್ಮಿತ್ ಸಿಂಗ್ ಸೋಧಿ, ಮನೋರಂಜನ್ ಕಾಲಿಯಾ ಮತ್ತು ಪಂಜಾಬ್‌ನ  ಅಮನ್‌ಜೋತ್ ಕೌರ್ ರಾಮೂವಾಲಿಯಾ ಅವರನ್ನು ರಾಷ್ಟ್ರೀಯ ಕಾರ್ಯಕಾರಿಣಿಗೆ ವಿಶೇಷ ಆಹ್ವಾನಿತರನ್ನಾಗಿ ನೇಮಕ ಮಾಡಲಾಗಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next