ಶ್ರೀನಗರ: ದಕ್ಷಿಣ ಕಾಶ್ಮೀರದ ಹಿಮಾಲಯದಲ್ಲಿರುವ ಅಮರನಾಥ ದೇಗುಲದ ವಾರ್ಷಿಕ ಯಾತ್ರೆ ಆರಂಭಗೊಂಡಿದ್ದು, ಶನಿವಾರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಯಾತ್ರೆಗೆ ವಿಧ್ಯುಕ್ತ ಚಾಲನೆ ನೀಡಲಾಗಿದೆ.
Advertisement
ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ದೇಗುಲದಲ್ಲಿ ನಡೆದ ಪ್ರಥಮ ಪೂಜಾ ಕಾರ್ಯಕ್ರಮಕ್ಕೆ ವೀಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಂಡಿದ್ದಾರೆ. ಈ ವೇಳೆ ಟ್ವೀಟ್ ಮಾಡಿ ಭಕ್ತರಿಗೆ ಶುಭ ಹಾರೈಸಿದ್ದಾರೆ.