ಜಮ್ಮು: ಬಿಹಾರದಿಂದ ಅಮರನಾಥ ಯಾತ್ರೆಗೆ ತೆರಳಿ ವಾಪಸಾಗುತ್ತಿದ್ದ ವೇಳೆ ಶುಕ್ರವಾರ ರಾತ್ರಿ ಕಾಳಿ ಮಾತಾ ಮೋರ್‌ಗೆ ಸಮೀಪವಿರುವ ಟ್ರ್ಯಾಕ್‌ನಿಂದ ಸುಮಾರು ೩೦೦ ಅಡಿ ಪ್ರಪಾತಕ್ಕೆ ಬಿದ್ದು ಯಾತ್ರಿಕರೊಬ್ಬರು ಮೃತಪಟ್ಟಿದ್ದು ಇನ್ನೊಬ್ಬರು ಗಾಯಗೊಂಡಿರುವುದಾಗಿ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ ಸಂಜೆ ಇಬ್ಬರು ಯಾತ್ರಾರ್ಥಿಗಳು ಪವಿತ್ರ ಗುಹೆಯಿಂದ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
ಯಾತ್ರೆ ಮುಗಿಸಿ ಹಿಂತಿರುಗುವ ವೇಳೆ ಇಬ್ಬರು ಆಯತಪ್ಪಿ ಟ್ರ್ಯಾಕ್ ನಿಂದ ಮುನ್ನೂರು ಅಡಿ ಆಳಕ್ಕೆ ಬಿದ್ದಿದ್ದಾರೆ, ತಕ್ಷಣ ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿತು ರಕ್ಷಣೆಗೆ ಮುಂದಾಗಿದ್ದಾರೆ ಈ ವೇಳೆ ಓರ್ವರು ಮೃತಪಟ್ಟಿದ್ದು ಇನ್ನೋರ್ವರು ಗಾಯಗೊಂಡಿದ್ದಾರೆ. ಗಾಯಗೊಂಡ ಮಹಿಳೆಯನ್ನು ಬಾಲ್ಟಾಲ್ ಬೇಸ್ ಕ್ಯಾಂಪ್ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅವರು ಹೇಳಿದರು. ಮೃತರನ್ನು ಬಿಹಾರ ಮೂಲದ ವಿಜಯ್ ಕುಮಾರ್ ಎಂದು ಗುರುತಿಸಲಾಗಿದ್ದು, ಗಾಯಗೊಂಡವರನ್ನು ಬಿಹಾರ ಮೂಲದ ಮಮತಾ ಕುಮಾರಿ ಎಂದು ಗುರುತಿಸಲಾಗಿದೆ.
ಗಾಯಗೊಂಡ ಯಾತ್ರಾರ್ಥಿ ಬ್ರಾರಿಮಾರ್ಗ್ ಬೇಸ್ ಕ್ಯಾಂಪ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಈ ವರ್ಷ ಅಮರನಾಥ ಯಾತ್ರೆಯಲ್ಲಿ ಮೃತಪಟ್ಟ ಎರಡನೇ ಪ್ರಕರಣವಾಗಿದೆ. ಆಗಸ್ಟ್ 15 ರಂದು ದೆಹಲಿಯ 65 ವರ್ಷದ ಯಾತ್ರಿಕ ಹೃದಯಾಘಾತದಿಂದ ನಿಧನರಾಗಿದ್ದರು.