ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಅಮರನಾಥ ಯಾತ್ರೆಯನ್ನು ಶುಕ್ರವಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಹವಾಮಾನ ವೈಪರೀತ್ಯದಿಂದಾಗಿ ಬಾಲ್ವಾಲ್ ಹಾಗೂ ಪಹಲ್ಗಾಮ್ ಅವಳಿ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನು ಇಂದು ಬೆಳಗ್ಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಪವಿತ್ರ ಗುಹಾ ದೇಗುಲಕ್ಕೆ ತೆರಳಲು ಯಾವುದೇ ಯಾತ್ರಾರ್ಥಿಗಳಿಗೆ ಅವಕಾಶ ನೀಡಿಲ್ಲಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಳೆ ಕಡಿಮೆಯಾಗುತ್ತಿದ್ದಂತೆ ಪವಿತ್ರ ದೇಗುಲಕ್ಕೆ ಯಾತ್ರೆ ಪುನರಾರಂಭವಾಗುವ ನಿರೀಕ್ಷೆಯಿದೆ.
ಮುಂಜಾನೆಯಿಂದಲೂ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಚಂದರಕೋಟ್ ಬಳಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಯಾತ್ರಾರ್ಥಿಗಳಿಗೆ ಬಾಲ್ಟಾಲ್ ಹಾಗೂ ನುನ್ವಾನ್ ಬೇಸ್ ಕ್ಯಾಂಪ್‌ಗಳಲ್ಲಿ ಆಶ್ರಯ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.