Advertisement
ರಾಜವಂಶಸ್ಥರು ವಾಸಿಸುತ್ತಿರುವ ಅರಮನೆಯ ಭಾಗದ ಮೇಲ್ಛಾವಣಿ ಯಿಂದ ನೀರು ಹೆಚ್ಚಿನ ಪ್ರಮಾಣದಲ್ಲಿ ಸೋರುತ್ತಿದ್ದು, ಛಾವಣಿಯ ಪ್ಲಾಸ್ಟರಿಂಗ್ ಉದುರಿ ಬಿದ್ದಿದೆ. ಆಗ ಯಾರೂ ಇಲ್ಲದಿದ್ದ ಕಾರಣ ಅಪಾಯ ಸಂಭವಿಸಿಲ್ಲ. ನೆಲಕ್ಕೆ ಹಾಸಲಾಗಿರುವ ಟೈಲ್ಸ್‌ಗಳೂ ಕಿತ್ತು ಬಂದಿವೆ ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಹೇಳಿದ್ದಾರೆ.
Related Articles
ಇಡೀ ದೇಶದಲ್ಲಿ ಸ್ವಾತಂತ್ರ್ಯದ ಬಳಿಕ ಸರಕಾರದಿಂದ ನಾವು ಪಟ್ಟಷ್ಟು ತೊಂದರೆಯನ್ನು ಬೇರೆ ಯಾವ ರಾಜಮನೆತನವೂ ಅನುಭವಿಸಿಲ್ಲ. ನಮ್ಮ ತಪ್ಪಿಲ್ಲದಿದ್ದರೂ ನಾವು ನೋವು ಅನುಭವಿಸಬೇಕಿದೆ. ನ್ಯಾಯಾಲಯಗಳು ನಮ್ಮ ಪರ ತೀರ್ಪು ನೀಡಿದರೂ ಸರಕಾರ ಜಾರಿಗೆ ತರುತ್ತಿಲ್ಲ ಎಂದು ಪ್ರಮೋದಾದೇವಿ ಒಡೆಯರ್ ಅವರು ಮಂಗಳವಾರ “ಉದಯವಾಣಿ’ಯೊಂದಿಗೆ ತಮ್ಮ ನೋವನ್ನು ತೋಡಿಕೊಂಡರು. ನಾನು ರಾಜ್ಯ ಸರಕಾರದ ಅನುಮತಿ ಪಡೆದು ಅರಮನೆಯ ಕೆಲವು ಭಾಗಗಳಲ್ಲಿ ಪಾರಂಪರಿಕ ಕಟ್ಟಡದ ಸಂರಕ್ಷಣೆಗಾಗಿ ಸ್ವಂತ ಹಣದಿಂದ ದುರಸ್ತಿ ಕಾರ್ಯ ಮಾಡುತ್ತಿದ್ದೇನೆ. ಆದರೆ, ಸರಕಾರದಿಂದ ಈ ಹಣ ನಮಗೆ ಮರು ಪಾವತಿಯಾಗಿಲ್ಲ. ಸರಕಾರಕ್ಕೆ ಪತ್ರ ಬರೆದರೂ ಪ್ರತಿಕ್ರಿಯೆ ಬರುತ್ತಿಲ್ಲ. ಇದರಿಂದ ಮನಸ್ಸಿಗೆ ತುಂಬಾ ನೋವಾಗುತ್ತದೆ ಎಂದು ಅವರು ಹೇಳಿದರು. ಅರಮನೆ ಸ್ವಾಧೀನಪಡಿಸಿಕೊಳ್ಳುವ ಸರಕಾರದ ಕಾಯ್ದೆ ವಿರುದ್ಧ ಕೋರ್ಟಿ ನಲ್ಲಿ ದಾವೆ ಹೂಡಿದ್ದೇವೆ. ಇದು ಇತ್ಯರ್ಥವಾಗುವವರೆಗೂ ಮೈಸೂರು ಅರಮನೆ ನಿರ್ವಹಣೆಯನ್ನು ಸರಕಾರ ಮಾಡಬೇಕು. ಅರಮನೆ ವೀಕ್ಷಿಸಲು ಬರುವವರಿಂದ ಪ್ರವೇಶ ದರ ಪಡೆಯಲಾಗುತ್ತದೆ. ಈ ಹಣದಿಂದಲೇ ಅರಮನೆ ಕಟ್ಟಡದ ನಿರ್ವಹಣೆ ಮಾಡಬಹುದು ಎಂದರು.
Advertisement
-ಕೂಡ್ಲಿ ಗುರುರಾಜ