Advertisement
ಮನೆ ತಗ್ಗು ಪ್ರದೇಶದಲ್ಲಿರುವುದರಿಂದ ಮಳೆಗಾಲದಲ್ಲಿ ಮನೆಆವರಣ, ಬಾವಿ ತ್ಯಾಜ್ಯ ನೀರಿನಿಂದ ತುಂಬಿ ಹೋಗುತ್ತದೆ. ಕಳೆದ ವರ್ಷ ಇದೇ ರೀತಿ ಸಮಸ್ಯೆಯಾಗಿದ್ದಾಗ ಅಂದಿನ ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಲಾಗಿತ್ತು. ಅವರು ನೀರು ಹರಿಯಲು ವ್ಯವಸ್ಥೆ ಮಾಡಿಸಿಕೊಟ್ಟಿದ್ದರು. ಆದರೆ ಈ ವರ್ಷ ತಡೆಯನ್ನು ತೆರವು ಮಾಡಲಾಗಿದೆ. ಇದರಿಂದ ಸಮಸ್ಯೆಯಾಗಿದೆ. ಹಾಗಾಗಿ ಕುಟುಂಬ ಮತ್ತೆ ಈ ಬಾರಿಯೂ ಜಿಲ್ಲಾಡಳಿತದ ಮೊರೆ ಹೋಗಿದೆ. ಕೊಳಕು ನೀರು ಕುಡಿಯುವ ಸ್ಥಿತಿ ನಿರ್ಮಾಣವಾಗಿದೆ.