Advertisement
ಪ್ರಕರಕಣದಲ್ಲಿ ಈಗಾಗಲೇ ಮಾಗಡಿ ಮುಖ್ಯರಸ್ತೆಯ ಸೈಯದ್ ತಜ್ಮುಲ್ ಪಷಾ(54), ಪ್ಯಾಲೇಸ್ ಗುಟ್ಟಹಳ್ಳಿಯ ಸಲೀಂ ಪಾಷಾ (48), ನಾಸೀ ಪಾಷಾ(34) ಮತ್ತು ಜೆ.ಪಿ.ನಗರದ ರಫೀ ಉಲ್ಲಾ ಶರೀಫ್ (45) ಅವರನ್ನು ಬಂಧಿಸಲಾಗಿತ್ತು. ಆರೋಪಿಗಳ ವಿಚಾರಣೆಯಲ್ಲಿ ಕೋಲಾರದ ಸಲ್ಮಾನ್ ಎಂಬಾತ ಅಂಬರ್ ಗ್ರೀಸ್ ಕೊಟ್ಟಿರುವುದಾಗಿ ಹೇಳಿದ್ದರು.
Related Articles
Advertisement
ಅಂಬರ್‌ಗ್ರೀಸ್ ತಿಮಿಂಗಲದ ವೀರ್ಯ ವಿಶೇಷತೆಅಂಬರ್ಗ್ರೀಸ್ ಎಂಬುದು ತಿಮಿಂಗಿಲದ ಪಡೆದ ವೀರ್ಯವಾಗಿದ್ದು, ಘನ ಮೇಣದ ವಾಸನೆಯಿಂದ ಕೂಡಿರುತ್ತದೆ. ಈ ವಸ್ತುವನ್ನು ಸುಗಂಧ ದ್ರವ್ಯ ಮತ್ತು ಔಷಧಿ ತಯಾರಿಕೆಯಲ್ಲಿ ಬಳಸಲಾಗುತ್ತಿದೆ. ಅದಕ್ಕೆ ಅರಬ್, ಚೀನಾ ಮತ್ತು ಪಾಶ್ಚಿಮಾತ್ಯ ದೇಶಗಳಲ್ಲಿ ಅಪಾರ ಬೇಡಿಕೆ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ.ಗೆ ಸುಮಾರು ಒಂದೂವರೆ ಕೋಟಿ ರೂ. ಮೌಲ್ಯಯುಳ್ಳದಾಗಿದೆ. ಆರೋಪಿಗಳು ಯಾರಿಗೆ ಮಾರಾಟಕ್ಕೆ ಮುಂದಾಗಿದ್ದರು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು. ಅಂಬರ್‌ಗ್ರೀಸ್ ಅನ್ನು ವನ್ಯಜೀವಿ ಕಾಯ್ದೆ ಅಡಿಯಲ್ಲಿ ನಿಷೇಧಿಸಲಾಗಿದೆ. ಮಾರುಕಟ್ಟೆಯಲ್ಲಿ ಇದನ್ನು ಮಾರಾಟ ಮಾಡುವುದು ಕಾನೂನು ಬಾಹಿರವಾಗಿದೆ. ಹೀಗಾಗಿ ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.