Advertisement
ಇದೇನಪ್ಪಾ, ಅಂಬರೀಷ್ ಅವ್ರು ನಮಸ್ಕಾರ ಗಿಮಸ್ಕಾರ ಅಂತ ಹೇಳ್ತ ಇದ್ದಾರೆ, ಅವ್ರಿಗೆ ವಯಸ್ಸಾಯ್ತು ಅಂತ ಅಂದ್ಕೋಬೇಡಿ. ತುಂಬಾ ವರ್ಷಗಳ ನಂತರ ನಿಮ್ಮನ್ನೆಲ್ಲಾ ಈ ಪತ್ರದ ಮುಖಾಂತರ ಮಾತಾಡ್ಬೇಕು ಅನ್ನುಸ್ತು. ಅದಕ್ಕೆ ಒಂದು ಕಾರಣಾನೂ ಇದೆ. ಹುಟ್ಟಿದ್ದು ಮಂಡ್ಯ, ಕುಡಿದಿದ್ದು ಕಾವೇರಿ ನೀರು ಅನ್ನೋ ಹಾಗೇ ಹುಟ್ಟಿದಾಗ ಅಮರ್‌ನಾಥ್ ಆಗಿದ್ದ ನು ಬೆಳಿತಾ ಬೆಳಿತಾ ನಿಮ್ಮ ಅಂಬರೀಷ್ ಆದೆ.
Related Articles
Advertisement
ಪುಟ್ಟಣ್ಣನ ಜಲೀಲನ ಪಾತ್ರ ಮಾಡ್ತಾ ಮಾಡ್ತಾ ನನಗೇ ಗೊತ್ತಿಲ್ಲದ ನನ್ನೊಳಗೆ ಒಬ್ಬ ಪರಿಪೂರ್ಣ ಕಲಾವಿದ ಬೆಳಿತಾ ಹೋದ. ಹಿಂದಿನ 45 ವರ್ಷಗಳ ಕಾಲ ನೀವು ನನ್ನ ಮೇಲಿಟ್ಟ ಪ್ರೀತಿ, ಅಭಿಮಾನದಿಂದ ನೀವು ನನಗೆ ಕೊಟ್ಟ ಬಿರುದು “ರೆಬಲ್ ಸ್ಟಾರ್’. ಇಷ್ಟ ಪಟ್ಟ ಹುಡುಗಿ ಜೊತೆ ಮುಂದೆ ಮದುವೆ ಆಯ್ತು. ಮುದ್ದಾದ ಮಗ ಕೂಡ ಹುಟ್ಟಿದ. ಜೀವನ ನಿಧಾನವಾಗಿ ರಾಜಕೀಯದ ಕಡೆಗೆ ಹರೀತು. ಜನ ಸೇವೆಯನ್ನ ಮಾಡ್ತ ಬಂದೆ.
ಸಿನಿಮಾ ನಟನೆಯನ್ನೇನು ಬಿಟ್ಟಿರಲಿಲ್ಲ. ಚಿತ್ರರಂಗದ ಆತ್ಮೀಯರು, ಹಿತೈಶಿಗಳು, ಸ್ನೇಹಿತರು ಒತ್ತಾಯಕ್ಕೆ ಪ್ರೀತಿಗೆ ಸೋತು ಅಲ್ಲೊಂದು ಇಲ್ಲೊಂದು ಪಾತ್ರಗಳನ್ನ ಮಾಡ್ತಾ ಇದ್ದೆ. ಸಂತೋಷದ ಜೀವನ ಸಾಗ್ತ ಬಂತು. ಯಾವಾಗ ಅನಾರೋಗ್ಯದಿಂದ ಆಸ್ಪತ್ರೇಲಿ ಇದ್ದೆ, ಆಗ ನನ್ನೊಳಗಿನ ಕಲೆ ಹಾಗೇ ಇತ್ತು. ಮಾತನಾಡಲು ಶುರು ಮಾಡಿದೆ. ಆಗ ಹುಟ್ಟಿಕೊಂಡಿದ್ದೇ ಈ ಚಡಪಡಿಕೆ.
ಅಂಬರೀಷ್