Advertisement
1935ರ ಜೂನ್ 4ರಂದು ಕಾರ್ಕಳದ ಮುದ್ರಾಡಿಯಲ್ಲಿ ಜನಿಸಿದ ಅಂಬಾತನಯ ಮುದ್ರಾಡಿ ಅವರ ಮೂಲ ಹೆಸರು ಕೇಶವ ಶೆಟ್ಟಿಗಾರ್. ಶಾಲಾ ವಿದ್ಯಾಭ್ಯಾಸ ಎಂಟನೆಯ ತರಗತಿಯವರೆಗೆ ಪಡೆದಿದ್ದರು. ಸ್ವಂತ ಆಸಕ್ತಿಯಿಂದ ಅಧ್ಯಯನ ಮಾಡಿ ಬೆಳೆದ ವ್ಯಕ್ತಿತ್ವ ಅಂಬಾತನಯರದು.
Related Articles
Advertisement
ಇತ್ತೀಚೆಗೆ ನಡೆದ ಉಡುಪಿಯಲ್ಲಿ ಜರಗಿದ ಪ್ರಥಮ ಯಕ್ಷಗಾನ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದದಲ್ಲಿ ಪಾಲ್ಗೊಂಡಿದ್ದರು. ಇದೇ ಅವರ ಕೊನೆಯ ಕಾರ್ಯಕ್ರಮವಾಗಿತ್ತು. ಈ ಸಂದರ್ಭದಲ್ಲಿ ‘ಯಕ್ಷಗಾನ ಮತ್ತು ಹರಿಕಥೆ ಒಂದು ತೌಲನಿಕ ಅಧ್ಯಯನ’ ಪುಸ್ತಕವನ್ನು ಪ್ರಕಟಿಸಲಾಗಿತ್ತು.
ಸಾಹಿತ್ಯ ಕೃಷಿಗಾಗಿ ಮುದ್ರಾಡಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ, ಪಾರ್ತಿಸುಬ್ಬ ಪ್ರಶಸ್ತಿ ಮುಂತಾದ ಶ್ರೇಷ್ಠ ಗೌರವಗಳು ಪ್ರಾಪ್ತಿಯಾಗಿವೆ. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಮಾಡಿದ್ದಾರೆ.
ಪತ್ನಿ, ಮೂವರು ಪುತ್ರರು, ಐವರು ಪುತ್ರಿಯರನ್ನು ಹಾಗೂ ಅಪಾರ ಶಿಷ್ಯ ಬಳಗವನ್ನು ಅಗಲಿದ್ದಾರೆ. ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ನಾಳೆ (22-2-2023) ಬೆಳಗ್ಗೆ 10 ಗಂಟೆಗೆ ಮುದ್ರಾಡಿಯಲ್ಲಿ ಜರುಗಲಿದೆ ಎಂದು ಮೂಲಗಳು ತಿಳಿಸಿದೆ.