Advertisement
ಉರ್ವಸ್ಟೋರ್ ಬಳಿಯ ಅಂಗಡಿಗುಡ್ಡೆಯಲ್ಲಿ ಸುಮಾರು 17.85 ಕೋ.ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಅಂಬೇಡ್ಕರ್ ಭವನದ ಕಾಮಗಾರಿಯ ಹಿನ್ನೆಲೆಯಲ್ಲಿ 14 ಕೋ.ರೂ. ಸರಕಾರದಿಂದ ಮಂಜೂರಾಗಿದೆ. 3.5 ಕೋಟಿ ರೂ. ವನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿ ಕಾರ, ಜಿಲ್ಲಾ ನಗರಾಭಿವೃದ್ಧಿ ಕೋಶ ಮತ್ತು ದ.ಕ.ಜಿ.ಪಂ.ನಿಂದ ಅನುದಾನ ಒದಗಿಸಬೇಕು ಎಂದು ಈ ಹಿಂದೆ ಸಮಾಜ ಕಲ್ಯಾಣ ಇಲಾಖೆ ಮನವಿ ಸಲ್ಲಿಸಿತ್ತು.
Related Articles
Advertisement
2012-13ರಲ್ಲಿ ಮಂಜೂ ರಾದ ದ.ಕ. ಜಿಲ್ಲಾ ಮಟ್ಟದ ಅಂಬೇ ಡ್ಕರ್ ಭವನಕ್ಕೆ ನಾಲ್ಕು ವರ್ಷಗಳ ಬಳಿಕ 2017ರ ಜನವರಿಯಲ್ಲಿ ಶಂಕು ಸ್ಥಾಪನೆ ನಡೆಸಲಾಗಿತ್ತು. ಒಂದು ವರ್ಷದಲ್ಲಿ ಪೂರ್ಣ ಗೊಳ್ಳುವ ಭರವಸೆಯನ್ನು ಅಂದಿನ ಸಮಾಜ ಕಲ್ಯಾಣ ಇಲಾಖೆಯ ಸಚಿವ ಎಚ್. ಆಂಜನೇಯ ತಿಳಿಸಿದ್ದರು.
ಆಕರ್ಷಕ ವಿನ್ಯಾಸದ ಭವನಅಂಬೇಡ್ಕರ್ ಭವನ ಆಕರ್ಷಕ ವಿನ್ಯಾಸದಿಂದ ಗಮನ ಸೆಳೆಯುತ್ತಿದೆ. ಸುಮಾರು 700 ಆಸನಗಳ ಸುಸಜ್ಜಿತ ಸಭಾ ಭವನ ನಿರ್ಮಾಣವಾಗಿದೆ. ಬೃಹತ್ ವೇದಿಕೆ ಸಭೆ, ಸಮಾರಂಭಗಳ ಜತೆಗೆ ರಂಗ ಚಟುವಟಿಕೆಗಳಿಗೆ ಅನುಕೂಲಕರವಾಗಿದೆ. ದ.ಕ. ಜಿಲ್ಲಾ ಪಂ. ಕಚೇರಿ ಕಟ್ಟಡದಲ್ಲಿರುವ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಮತ್ತು ನಗರದ ಮಾರ್ಕೆಟ್ ರಸ್ತೆಯಲ್ಲಿರುವ ಮಂಗಳೂರು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಕಚೇರಿಯು ಅಂಬೇಡ್ಕರ್ ಭವನಕ್ಕೆ ಸ್ಥಳಾಂತರವಾಗಲಿದೆ. ಸುಸಜ್ಜಿತ ಗ್ರಂಥಾಲಯ ಮತ್ತು ಪರಿಶಿಷ್ಟ ಜಾತಿ/ವರ್ಗದ ವಿದ್ಯಾರ್ಥಿಗಳಿಗೆ ಕೋಚಿಂಗ್ ಸೆಂಟರ್ ಕೂಡ ಭವನದಲ್ಲಿ ಆರಂಭಗೊಳ್ಳುವ ನಿರೀಕ್ಷೆ ಇದೆ. ಮನವಿ ಸಲ್ಲಿಕೆ
ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಂಡಿದೆ. ಸುಮಾರು 17.85 ಕೋ.ರೂ.ನಲ್ಲಿ ಭವನ ನಿರ್ಮಾಣವಾಗಿದೆ. ಆದರೆ, 3.5 ಕೋಟಿ ರೂ. ಅನುದಾನ ಅಗತ್ಯವಿದ್ದು, ಈ ಬಗ್ಗೆ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಅನುದಾನದ ನಿರೀಕ್ಷೆಯಲ್ಲಿದ್ದೇವೆ.
- ಡಾ| ಯೋಗೀಶ್, ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ದ.ಕ.