Advertisement
ಕೊರೊನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ಇರುವುದರಿಂದ ಸಂವಿಧಾನ ಶಿಲ್ಪಿಗೆ ಪುಷ್ಪಾರ್ಚನೆ ಹಾಗೂ ಮಾಲಾರ್ಪಣೆ ಮಾಡುವುದರೊಂದಿಗೆ ಸರಳವಾಗಿ ಜಯಂತಿ ಆಚರಿಸಲಾಯಿತು. ನಗರ ಪೊಲೀಸ್ ಆಯುಕ್ತ ಎನ್. ಸತೀಶಕುಮಾರ, ಎಸ್ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿ.ಪಂ ಸಿಇಒ ಡಾ| ಪಿ. ರಾಜಾ, ಪಾಲಿಕೆ ಆಯುಕ್ತ ರಾಹುಲ್ ಪಾಂಡ್ವೆ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಅಲ್ಲಾಭಕ್ಷ, ಎಸಿಪಿ ವಿಜಯಕುಮಾರ, ಎಸ್ಸಿ-ಎಸ್ಟಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ನೌಕರರು ನಮನ ಸಲ್ಲಿಸಿದರು.
ಅಜಯಸಿಂಗ್, ಬಸವರಾಜ ಮತ್ತಿಮಡು, ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪ ಕಮಕನೂರ ವಿವಿಧೆಡೆ ಡಾ| ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.