Advertisement
ನಗರದ ಅಂಬೇಡ್ಕರ ವೃತ್ತದಲ್ಲಿ ಡಾ| ಅಂಬೇಡ್ಕರ ಅವರ 127ನೇ ಜಯಂತ್ಯುತ್ಸವ ನಿಮಿತ್ತ ಶನಿವಾರ ಆಯೋಜಿಸದ್ದ ಬೃಹತ್ ಬಹಿರಂಗ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಜಾತಿ ಎಂಬುದು ಮಾನವ ನಿರ್ಮಿತವಾದದ್ದು. ಯಾರು ಯಾವುದೇ ಜಾತಿಯಲ್ಲಿ ಹುಟ್ಟಬೇಕು ಎಂಬ ಉದ್ದೇಶ ಹೊಂದಿರುವುದಿಲ್ಲ. ಆದರೆ, ನಾವು ಮಾಡುವ ಕಾಯಕವೇ ಜಾತಿಗಳಾಗಿರುವುದು ದೇಶದ ದೊಡ್ಡ ದುರಂತ ಎಂದು ಬೇಸರ ವ್ಯಕ್ತಪಡಿಸಿದರು. ಅಂಬೇಡ್ಕರರ ಚಿಂತನೆಗಳು ದೇಶದ ದಿನ ದಲಿತರ, ಬಡವರ ಪರವಾಗಿದ್ದವು. ಬಾಬಾ ಸಾಹೇಬರು ಮನುಕುಲದ ಏಳ್ಗೆಗಾಗಿ ಹೋರಾಟ ನಡೆಸಿದರೆ ಹೊರತು ಯಾವುದೇ ಜಾತಿಯ ವಿರುದ್ಧ ಅಲ್ಲ. ಸಮಾಜದಲ್ಲಿ ಹರಡಿರುವ ಜಾತಿಯ ವಿಷ ಬೀಜ ನಿರ್ನಾಮವಾಗಿ ಸಾತ್ವಿಕ ಬದುಕು ಬದುಕುವಂತಾಗಬೇಕು. ಮಹಾತ್ಮರ ಜಯಂತಿಗಳನ್ನು ವೇದಿಕೆಗೆ ಸೀಮಿತಗೊಳಿಸದೇ ಅವರ ತತ್ವಾದರ್ಶಗಳನ್ನು ದಿನ ನಿತ್ಯದ ಬದುಕಿನಲ್ಲಿ ಆಚರಣೆಯಲ್ಲಿ ತಂದುಕೊಳ್ಳಬೇಕು ಎಂದು ಸಲಹೆ ನೀಡಿದರು.
Related Articles
Advertisement
ಆಣದೂರ ಧಮ್ಮ ದರ್ಶನ ಭೂಮಿಯ ಶ್ರೀ ಭಂತೆ ವರಜ್ಯೋತಿ ಅವರ ಸಾನಿಧ್ಯ ಮತ್ತು ಜಯಂತಿ ಉತ್ಸವ ಸಮಿತಿ ಅಧ್ಯಕ್ಷ ಮಾರುತಿ ಬೌದ್ಧೆ ಅಧ್ಯಕ್ಷತೆ ವಹಿಸಿದ್ದರು. ಚಾಮರಾಜನಗರದ ಪ್ರಗತಿಪರ ಚಿಂತಕ ಅರಕಲವಾಡಿ ನಾಗೇಂದ್ರ ಮತ್ತು ಸಂಬಾಜಿ ಬ್ರಿಗೇಡ್ ಅಧ್ಯಕ್ಷ ಸುಭಾಷ ಶೆಡೋಳೆ ಉಪನ್ಯಾಸ ನೀಡಿದರು. ಸಮಿತಿಯ ಗೌರವಾಧ್ಯಕ್ಷ ಫರ್ನಾಂಡಿಸ್ ಹಿಪ್ಪಳಗಾಂವ್, ಉಪಾಧ್ಯಕ್ಷ ಬಾಬುರಾವ ಪಾಸ್ವಾನ್, ಮೆರವಣಿಗೆ ಸಮಿತಿ ಅಧ್ಯಕ್ಷ ವಿಜಯಕುಮಾರ ಸೋನಾರೆ, ಪ್ರಚಾರ ಸಮಿತಿ ಅಧ್ಯಕ್ಷ ಮಹೇಶ ಗೋರನಾಳಕರ್, ಪ್ರಮುಖರಾದ ಅರುಣ ಪಾಟೀಲ, ವಿಷ್ಣುವರ್ಧನ ವಾಲೊªಡ್ಡಿ ಮತ್ತಿತರರು ವೇದಿಕೆಯಲ್ಲಿದ್ದರು.