Advertisement

ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಂಬೇಡ್ಕರ್‌ ಜಯಂತಿ

12:29 PM Feb 14, 2017 | |

ಮೈಸೂರು: ರಾಜ್ಯ ಸರ್ಕಾರದ ವತಿಯಿಂದ ಮೇ ತಿಂಗಳಲ್ಲಿ ಡಾ. ಬಿ.ಆರ್‌. ಅಂಬೇಡ್ಕರ್‌ ಅವರ ಜಯಂತ್ಯುತ್ಸವ ವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಚರಿಸ ಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಹೇಳಿದರು.

Advertisement

ಸಮಾಜ ಕಲ್ಯಾಣ ಇಲಾಖೆ, ಸಮ್ಮೇಳನ ಆಯೋಜನಾ ಸಮಿತಿ, ಮೈಸೂರು ವಿವಿ ಡಾ.ಬಿ.ಆರ್‌.ಅಂಬೇಡ್ಕರ್‌ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರದ ವತಿಯಿಂದ ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್‌ ಸಭಾಂಗಣದಲ್ಲಿ ಸೋಮವಾರ ಆಯೋಜಿ ಸಿದ್ದ ಎರಡು ದಿನಗಳ ಮೈಸೂರು ವಿಭಾಗ ಮಟ್ಟದ ಸಾಮಾಜಿಕ ಕಾರ್ಯಕರ್ತರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಅಂಬೇಡ್ಕರ್‌ ಭಾರತ ಕಂಡ ಅತ್ಯಂತ ಬುದ್ಧಿಜೀವಿ, ಕೇವಲ ಭಾರತಕ್ಕೆ ಮಾತ್ರವಲ್ಲದೆ ವಿಶ್ವಕ್ಕೆ ಮಾದರಿಯಾದ ಸಂವಿಧಾನವನ್ನು ದೇಶಕ್ಕೆ ನೀಡಿದ್ದಾರೆ. ಭಾರತವನ್ನು ಜಾತ್ಯತೀತ ರಾಷ್ಟ್ರವನ್ನಾಗಿಸುವ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿದ ಅಂಬೇಡ್ಕರ್‌ ಅವರ ಜನ್ಮದಿನವನ್ನು ವಿಶ್ವಸಂಸ್ಥೆ ವಿಶ್ವ ಜಾnನದಿನವನ್ನಾಗಿ ಆಚರಿಸುತ್ತಿದೆ. ಹೀಗಾಗಿ ಅಂಬೇಡ್ಕರ್‌ ಅವರ ತತ್ವ-ಆದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು, ಯುವಕರು ಅದನ್ನು ಪಾಲಿಸಬೇಕು ಎಂದು ಹೇಳಿದರು.

ದೇಶಕ್ಕೆ ಉತ್ತಮ ಸಂವಿಧಾನ ನೀಡಿರುವ ಅಂಬೇಡ್ಕರ್‌ ಅವರ ಜಯಂತ್ಯುತ್ಸವವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲು ಸರ್ಕಾರ ಮುಂದಾಗಿದೆ. ಅದರಂತೆ ಮೇ ತಿಂಗಳಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನಆಯೋಜಿಸಲಿದ್ದು, ಇದಕ್ಕಾಗಿ ಸರ್ಕಾರ 8ರಿಂದ 10 ಕೋಟಿ ರೂ. ಹಣ ಮೀಸಲಿಟ್ಟಿದೆ. ಜಯಂತ್ಯುತ್ಸವಕ್ಕೆ ಅರ್ಥ ಶಾಸ್ತ್ರಜ್ಞ ಅಮರ್ತ್ಯಸೇನ್‌ ಸೇರಿದಂತೆ ಅಂತಾರಾಷ್ಟ್ರೀಯ ಮಟ್ಟದ ವಿಚಾರವಂತ ರನ್ನು ಆಹ್ವಾನಿಸಲು ಸಿದ್ಧತೆ ಮಾಡಲಾಗುತ್ತಿದೆ.

ಪ್ರಾಚೀನ ಭಾರತವನ್ನು ಪ್ರಬಲವಾಗಿ ನಿರ್ಮಿಸಲು ಮತ್ತು ಸಂವಿಧಾನ ಪ್ರಜಾ ಪ್ರಭುತ್ವದ ಬಗ್ಗೆ ತಿಳಿಸುವುದು ಸಂವಿಧಾನದ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವ ವಿದ್ಯಾನಿಲಯ, ಕಾಲೇಜುಗಳಲ್ಲಿ ಅಭಿಯಾನ ಹಮ್ಮಿಕೊಂಡು ಅಂಬೇಡ್ಕರ್‌ ವಿಚಾರ ಧಾರೆಗಳನ್ನು ತಿಳಿಸ ಲಾಗುವುದು ಎಂದರು. ಎರಡು ದಿನಗಳ ಕಾರ್ಯಾಗಾರದ ಮೊದಲ ದಿನದಂದು ನಡೆದ ವಿವಿಧ ಗೋಷ್ಠಿಗಳಲ್ಲಿ ಪ್ರಾಚೀನ ಭಾರತದಲ್ಲಿನ ಕ್ರಾಂತಿ ಮತ್ತು ಪ್ರತಿಕ್ರಾಂತಿ,

Advertisement

ಹಿಂದೂ ಕೋಡ್‌ ಬಿಲ್‌, ಜಾತಿ ವಿನಾಶ, ಪ್ರಭುತ್ವ ಮತ್ತು ಅಲ್ಪಸಂಖ್ಯಾತರು, ಕೊಡಗು ಜಿಲ್ಲೆಯ ಸಮುದಾಯಗಳ ವರ್ತಮಾನದ ತಲ್ಲಣಗಳು ಮತ್ತು ಸವಾಲು ಗಳು, ಚಾಮರಾಜನಗರ ಜಿಲ್ಲೆಯ ಸಮು ದಾಯಗಳ ವರ್ತಮಾನದ ತಲ್ಲಣಗಳು ಮತ್ತು ಸವಾಲುಗಳು ಹಾಗೂ ಮೈಸೂರು ಜಿಲ್ಲೆಯ ಸಮುದಾಯಗಳ ವರ್ತಮಾನದ ತಲ್ಲಣಗಳು ಮತ್ತು ಸವಾಲುಗಳು ಎಂಬ ವಿಷಯಗಳ ಕುರಿತು ಹಲವು ಸಂಪನ್ಮೂಲ ವ್ಯಕ್ತಿಗಳು ಪ್ರಬಂಧ ಮಂಡಿಸಿದರು.

ಕಾರ್ಯಕ್ರಮದಲ್ಲಿ ಮೈಸೂರು ವಿವಿ ಪ್ರಭಾರ ಕುಲಪತಿ ಪ್ರೊ. ಯಶವಂತ ಡೋಂಗ್ರೆ, ಕುಲಸಚಿವ ಪ್ರೊ.ಆರ್‌.ರಾಜಣ್ಣ, ಪರೀûಾಂಗ ಕುಲಸಚಿವ ಪ್ರೊ.ಜೆ.ಸೋಮಶೇಖರ್‌, ಅಂಬೇಡ್ಕರ್‌ ಜಾnನ ದರ್ಶನ ಅಭಿಯಾನದ ವಲಯ ಸಂಚಾಲಕ ಆರ್‌.ಸಿದ್ದರಾಜು ಇನ್ನಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next