Advertisement

ಅಂಬೇಡ್ಕರ್ ಆಲೋಚನೆಗಳೇ ದೇಶಕ್ಕೆ ಬುನಾದಿ

06:08 PM Apr 15, 2021 | Team Udayavani |

ಚಿಕ್ಕಮಗಳೂರು: ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ, ದೇಶಕಂಡ ಮಹಾನ್‌ ಚೇತನ ಅವರ ಕಲ್ಪನೆ ಆಲೋಚನೆಗಳು ದೇಶದ ಭವಿಷ್ಯದ ಭದ್ರಬುನಾದಿಯಾಗಿದೆ ಎಂದು ವಿಧಾನ ಪರಿಷತ್ತಿನ ಉಪಸಭಾಪತಿ ಎಂ.ಕೆ.ಪ್ರಾಣೇಶ್‌ ಹೇಳಿದರು.

Advertisement

ನಗರದ ಕುವೆಂಪು ಕಲಾ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಸಮಾಜಕಲ್ಯಾಣ ಇಲಾಖೆ, ನಗರಸಭೆ ಹಾಗೂ ಡಾ|ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ|ಬಿ. ಆರ್‌.ಅಂಬೇಡ್ಕರ್‌ ಅವರ 130ನೇ ಜನ್ಮದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ತುಳಿತಕ್ಕೆ ಒಳಗಾದಂತಹ ಜನಾಂಗವನ್ನು ಅಸಮಾನತೆಯಿಂದ ಸಮಾನತೆಯ ಕಡೆಗೆ ಕೊಂಡೊಯ್ಯಲು ಹಾಗೂ ಹಿಂದುಳಿದವರನ್ನು ಮುಖ್ಯವಾಹಿನಿಗೆ ತರಲು ಹೋರಾಟ ನಡೆಸಿದ ಪ್ರಾಮಾಣಿಕ ಪ್ರಯತ್ನಗಳಿಂದಾಗಿ ಅವರನ್ನು ಇತಿಹಾಸದ ಪುಟಗಳಲ್ಲಿ ಸೇರ್ಪಡೆಯಾಗುವಂತೆ ಮಾಡಿವೆ ಎಂದ ಅವರು, ಇಂತಹ ಮಹಾನ್‌ ವ್ಯಕ್ತಿಗಳನ್ನು ಮಾರ್ಗದರ್ಶಕರಾಗಿಟ್ಟುಕೊಂಡು ಅವರು ನಡೆದು ಬಂದ ದಾರಿಯಲ್ಲಿ ನಾವೆಲ್ಲರು ಸಾಗೋಣ ಎಂದು ತಿಳಿಸಿದರು.

ಶಾಸಕ ಸಿ.ಟಿ.ರವಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಾತಂತ್ರ್ಯ ನಂತರದಲ್ಲಿ ದೇಶದ ವಿಭಜನೆಯನ್ನು ವಿರೋಧಿಸಿದವರಲ್ಲಿ ಅಂಬೇಡ್ಕರ್‌ ಅವರು ಪ್ರಮುಖರಾಗಿದ್ದಾರೆ ಎಂದ ಅವರು, ಸ್ವಾತಂತ್ರ್ಯ ಬಂದು 74ವರ್ಷ ಕಳೆದರು ಇಂದಿಗೂ ಕೂಡ ಪ್ರಬಲ ಪ್ರಜಾಸತಾತ್ಮಕ ರಾಷ್ಟ್ರವಾಗಿ, ವಿವಿಧತೆಯಲ್ಲಿ ವೈವಿಧ್ಯತೆ ಒಳಗೊಂಡು ಏಕತೆಯನ್ನು ಮೈಗೂಡಿಸಿಕೊಂಡು ದೇಶ ಮುಂದೇ ಸಾಗಲು ಡಾ|ಬಿ.ಆರ್‌.ಅಂಬೇಡ್ಕರ್‌ ಅವರು ನೀಡಿರುವಂತಹ ಸಂವಿಧಾನವು ಭದ್ರ ಬುನಾದಿಯಾಗಿದೆ ಎಂದು ಹೇಳಿದರು.

ಡಾ|ಬಿ.ಆರ್‌.ಅಂಬೇಡ್ಕರ್‌ ಅವರನ್ನು ಕೇವಲ ದಲಿತ ನಾಯಕ ಎಂದು ಬಿಂಬಿಸಿದರೆ ಅವರ ವ್ಯಕ್ತಿತ್ವಕ್ಕೆ ಬಗೆಯುವ ಅಪಚಾರವಾಗುತ್ತದೆ. ಬದಲಾಗಿ ಇಡೀ ಜನಾಂಗಕ್ಕೆ ಮಹಾನಾಯಕರಾಗಿದ್ದಾರೆ, ಅಂಬೇಡ್ಕರ್‌ ಅವರು ಕತ್ತಲೆಯಿಂದ ಬೆಳಕಿನಡೆಗೆ ತೆಗೆದು ಕೊಂಡು ಹೋಗುವ ದೀಪವಾಗಿದ್ದಾರೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಕೆ.ಎನ್‌.ರಮೇಶ್‌ ಮಾತನಾಡಿ, ವಿದೇಶಿ ನೆಲದಲ್ಲಿ ಅರ್ಥಶಾಸ್ತ್ರ ವಿಭಾಗ ದಲ್ಲಿ ಡಾಕ್ಟರೇಟ್‌ ಪದವಿ ಪಡೆದವರಲ್ಲಿ ಡಾ|ಬಿ.ಆರ್‌. ಅಂಬೇಡ್ಕರ್‌ ಅವರು ಮೊದಲಿ ಗರಾಗಿದ್ದಾರೆ. ಇಂತಹ ಮಹಾನ್‌ ವ್ಯಕ್ತಿಗಳ ಜೀವನ ಶೈಲಿಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಣ ಎಂದು ತಿಳಿಸಿದರು.

Advertisement

ಜಿಪಂ ಅಧ್ಯಕ್ಷೆ ಸುಜಾತ ಕೃಷ್ಣಪ್ಪ ಮಾತನಾಡಿ, ಶೋಷಿತರ, ದಲಿತರ ಪರವಾಗಿ ಧ್ವನಿ ಎತ್ತಿ ಅವರ ಏಳ್ಗೆಗಾಗಿ ಕಾರ್ಯನಿರ್ವಹಿಸಿದ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾದರಿಯಾಗಿದ್ದು, ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಾಬು ಜಗಜೀವನ್‌ ರಾಮ್‌ ಹಾಗೂ ಡಾ|ಬಿ.ಆರ್‌.ಅಂಬೇಡ್ಕರ್‌ ಅವರ ಜೀವನ ಮತ್ತು ಸಾಧನೆಯ ಕುರಿತ ಕಿರು ಹೊತ್ತಿಗೆ ಬಿಡುಗಡೆಗೊಳಿಸಲಾಯಿತು. ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಜೀವನ ಮತ್ತು ಸಾಧನೆಯ ಬಗ್ಗೆ ಮೈಸೂರಿನ ವಿಶ್ರಾಂತ ಮಾಧ್ಯಮ ಉಪನ್ಯಾಸಕ ಹಾಗೂ ಅಂಬೇಡ್ಕರ್‌ ವಾದಿಗಳಾದ ಡಾ.ಬಿ.ಪಿ.ಮಹೇಶ್‌ ಚಂದ್ರಗುರು ಅವರು ಉಪನ್ಯಾಸ ನೀಡಿದರು. ಕಾರ್ಯಕ್ರಮಕ್ಕೂ ಮುನ್ನಾ ಜಿಲ್ಲಾ ಪಂಚಾಯತ್‌ ಆವರಣದಲ್ಲಿರುವ ಡಾ|ಬಿ.ಆರ್‌. ಅಂಬೇಡ್ಕರ್‌ ಅವರ ಪ್ರತಿಮೆಗೆ ವಿಧಾನ ಪರಿಷತ್‌ ಉಪಸಭಾಪತಿ ಎಂ.ಕೆ.ಪ್ರಾಣೇಶ್‌ ಹಾಗೂ ಶಾಸಕ ಸಿ.ಟಿ.ರವಿ ಅವರು ಮಾಲಾರ್ಪಣೆ ಮಾಡಿದರು.

ಜಿಪಂ ಉಪಾಧ್ಯಕ್ಷ ಬಿ.ಜೆ.ಸೋಮಶೇಖರಪ್ಪ, ಜಿಪಂ ಸದಸ್ಯರಾದ ಜಸಂತಾ ಅನಿಲ್‌ಕುಮಾರ್‌, ರವೀಂದ್ರಬೆಳವಾಡಿ. ತಾಪಂ ಅಧ್ಯಕ್ಷೆ ದಾûಾಯಿಣಿ ಪೂರ್ಣೇಶ್‌, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ಸಾವಿತ್ರಿ ರಾಜ್‌ ಕುಮಾರ್‌, ಜಿಪಂ ಸಿಇಒ ಎಸ್‌ .ಪೂವಿತ, ಉಪವಿಭಾಗಾ ಧಿಕಾರಿ ಡಾ| ಎಚ್‌.ಎಲ್‌. ನಾಗರಾಜ್‌, ಎಸ್‌ಪಿ ಅಕ್ಷಯ್‌, ಎಂ.ಎಚ್‌, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಬಿ.ವಿ.ಚೈತ್ರ, ನಗರಾಭಿವೃದ್ಧಿ ಪ್ರಾಧಿ ಕಾರದ ಅಧ್ಯಕ್ಷ ಆನಂದ್‌ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next