Advertisement

25 ಬ್ಲಾಕ್‌ ಸ್ಪಾಟ್‌ಗಳಲ್ಲಿ 20 ಆ್ಯಂಬುಲೆನ್ಸ್‌ ವ್ಯವಸ್ಥೆ

02:01 PM Feb 14, 2020 | Suhan S |

ಮಂಡ್ಯ: ಜಿಲ್ಲಾದ್ಯಂತ ಈಗಾಗಲೇ ಹೆಚ್ಚು ಅಪಘಾತ ಸಂಭವಿಸುವ 25 ಬ್ಲಾಕ್‌ ಸ್ಪಾಟ್‌ಗಳನ್ನು ಗುರುತಿಸಿ ಸ್ಥಳದಲ್ಲಿಯೇ 15ರಿಂದ 20 ಆ್ಯಂಬುಲೆನ್ಸ್‌ (108) ವ್ಯವಸ್ಥೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಇಲಾಖೆ, ಲೋಕೋ  ಪಯೋಗಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎಂ.ವಿ ವೆಂಕಟೇಶ್‌ ಸೂಚಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿ, ನಗರದ ಜಯಚಾಮರಾಜೇಂದ್ರ ಒಡೆಯರ್‌ ವೃತ್ತ, ಮಹಾವೀರ ವೃತ್ತ ಮತ್ತು ಸಕ್ಕರೆ ಕಾರ್ಖಾನೆ ವೃತ್ತಗಳನ್ನು ಈಗಾಗಲೇ ಸಮಿತಿಯಲ್ಲಿ ಬ್ಲಾಕ್‌ ಸ್ಪಾಟ್‌ಗಳೆಂದು ನಿರ್ಣಯಿಸಲಾಗಿದೆ. ಈ ಸ್ಥಳಗಳಲ್ಲಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾಸ್ಪತ್ರೆ, ಬಸ್‌ ನಿಲ್ದಾಣ ಮತ್ತು ರೈಲು ನಿಲ್ದಾಣಗಳಲ್ಲಿ ಸಾರ್ವಜನಿಕರು ರಸ್ತೆ ದಾಟಲು ಅನುಕೂಲವಾಗುವಂತೆ ಮೇಲ್ಸೇತುವೆ(ಸ್ಕೈವಾಕ್‌) ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರು.

ಅಪ್ರಾಪ್ತರಿಗೆ ವಾಹನ ಕೊಟ್ಟರೆ ಕ್ರಮ: ಅಪ್ರಾಪ್ತ ಶಾಲಾ-ಕಾಲೇಜು ವಿದ್ಯಾರ್ಥಿಗಳು ವಾಹನ ಬಳಸದಂತೆ ಅರಿವು ಕಾರ್ಯಕ್ರಮಕ್ಕೆ ಮುಖ್ಯ ಶಿಕ್ಷಕರು ಅಥವಾ ಪ್ರಾಂಶುಪಾಲರು ಕ್ರಮ ವಹಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿ, ಅಪ್ರಾಪ್ತರಿಗೆ ವಾಹನ ಚಲಾಯಿಸಲು ಪೋಷಕರು ಅಥವಾ ವಾಹನ ಮಾಲೀಕರು ಅವಕಾಶ ನೀಡಿದ್ದಲ್ಲಿ ಅಂತಹವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪರಶುರಾಮ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಪುರುಷೋತ್ತಮ್, ಅಬಕಾರಿ ಉಪ ಆಯುಕ್ತರು ಬಿ.ಶಿವಪ್ರಸಾದ್‌, ಕಾರ್ಮಿಕ ಅಧಿಕಾರಿ ಹೆಚ್‌.ಆರ್‌. ನಾಗೇಂದ್ರ, ಸಹಾಯಕ ಎಂಜಿನಿಯರ್‌ ಪಿಡಬ್ಲ್ಯುಡಿಇಲಾಖೆಯ ಪಿ.ರವಿ ಹಾಗೂ ಡಿಡಿಪಿಯು ಜಿ.ಆರ್‌ ಗೀತಾ ಮತ್ತು ಇನ್ನಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next