Advertisement

ಅಂಬೇಡ್ಕರ್‌ ಮುಂದೆ ಪಕ್ಷಗಳ ಒಗ್ಗಟ್ಟು

12:52 PM Apr 15, 2020 | Suhan S |

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌ ಅವರ 129 ನೇ ಜಯಂತಿಯನ್ನು ಮಂಗಳವಾರ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ನಾಯಕರು ಜತೆಯಾಗಿ ಆಚರಣೆ ಮಾಡಿದರು.

Advertisement

ವಿಧಾನಸೌಧದ ಮುಂಭಾಗದಲ್ಲಿರುವ ಅಂಬೇಡ್ಕರ್‌ ಅವರ ಪ್ರತಿಮೆಗೆ ಸರ್ಕಾರದ ವತಿಯಿಂದ ಗೌರವ ಸಲ್ಲಿಸುವ ಅಧಿಕೃತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವರ್ಷ  ಕೋವಿಡ್ 19 ವೈರಸ್‌ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಜಾರಿಯಲ್ಲಿರುವುದರಿಂದ ಸರಳವಾಗಿ ಆಚರಿಸಲು ನಿರ್ಧರಿಸಲಾಗಿತ್ತು. ಅದರಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಸಮಾಜಕಲ್ಯಾಣ ಸಚಿವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಜರಿದ್ದರು. ಅವರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಜರಾಗಿ ಎಲ್ಲರೂ ಏಕಕಾಲಕ್ಕೆ ಸಂವಿಧಾನ ಶಿಲ್ಪಿಗೆ ಗೌರವ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next