ವಿಧಾನಸಭೆ: ಸ್ಥಳೀಯ ಯೋಜನಾ ಪ್ರಾಧಿಕಾರಗಳ ಅಧಿಕಾರ ವ್ಯಾಪ್ತಿಗೆ ಒಳಪಡದೆ ಇರುವ ಪ್ರದೇಶದಲ್ಲಿ ಕಟ್ಟಡ ನಕ್ಷೆಗೆ ಮಂಜೂರು ಪಡೆಯಲು ಇದ್ದ ತಾಂತ್ರಿಕ ದೋಷಗಳನ್ನು ಸರಿಪಡಿಸಲು ರಾಜ್ಯ ಸರಕಾರ ತೀರ್ಮಾನಿಸಿದ್ದು, ಮುನ್ಸಿಪಲ್ ಕಾಯಿದೆಗೆ ತಿದ್ದುಪಡಿ ಮಾಡಿದೆ.
ಕರ್ನಾಟಕ ಮುನಿಸಿಪಾಲಿಟಿ ಕಾಯಿದೆಗೆ ತಿದ್ದುಪಡಿ ಮಾಡಿ ವಿಧಾನಸಭೆಯಲ್ಲಿ ಮಂಡಿಸಲಾಗಿದೆ.
ಇ- ಸ್ವತ್ತು ನಿಯಮ ಜಾರಿಯಿಂದ ನಕ್ಷೆ ಪಡೆಯುವುದಕ್ಕೆ ಆಗುತ್ತಿದ್ದ ಅಡಚಣೆ ನಿವಾರಿಸಲು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ.ಮಾಧುಸ್ವಾಮಿ ನೇತೃತ್ವದಲ್ಲಿ ಸಭೆ ನಡೆಸಿ ಕಾನೂನು ತಿದ್ದುಪಡಿಗೆ ನಿರ್ಧರಿಸಲಾಗಿತ್ತು.
ಇದನ್ನೂ ಓದಿ:ಜಾಗತಿಕ ಮಾರುಕಟ್ಟೆ ಎಫೆಕ್ಟ್: ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 1,000ಕ್ಕೂ ಅಧಿಕ ಅಂಕ ಕುಸಿತ
ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಇಲಾಖೆಯಿಂದ ಗ್ರಾಮಾಂತರ ಪ್ರದೇಶ ಕಟ್ಟಡ ನಕ್ಷೆಗಳಿಗೆ ಅನುಮೋದನೆ ಪಡೆಯುವುದಕ್ಕಾಗಿ 1961ರ ಅಧಿನಿಯಮದ 4 – ಕೆ ಪ್ರಕರಣವನ್ನು ಈ ಕಾಯಿದೆ ಜಾರಿಗೆ ಬಂದ ದಿನಾಂಕದಿಂದ ಕೈ ಬಿಡುವಂತೆ ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ.