Advertisement
ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಕಚೇರಿ ಸಭಾಂಗಣದಲ್ಲಿ ನಡೆದ 2021- 22ನೇ ಸಾಲಿನ ಪ್ರಧಾನಮಂತ್ರಿ ಮಾತೃವಂದನಾ ಯೋಜನೆ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ 2005, ನಿಯಮ 2006, ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತ ಸಮನ್ವಯ ಸಮಿತಿ, ಸಖೀ ಯೋಜನೆಯ ಟಾಸ್ಕ್ಫೋರ್ಸ್ ಸಭೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
Related Articles
Advertisement
ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು: ಜಿಲ್ಲೆಯಲ್ಲಿ ಒಟ್ಟು 38 ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 31 ಪ್ರಕಣಗಳನ್ನು ತಡೆಹಿಡಿಯಲಾಗಿದೆ. 6 ಪ್ರಕರಣಗಳಲ್ಲಿ ಎಫ್ಐಆರ್ ದಾಖಲಾಗಿದ್ದು, ಬಾಲ್ಯ ವಿವಾಹ ನಡೆದಿದ್ದಲ್ಲಿ ತಕ್ಷಣವೇ ಅವರ ವಿರುದ್ಧ ಎಫ್.ಐ.ಆರ್. ದಾಖಲಿಸಬೇಕು ಹಾಗೂ ಚೈಲ್ಡ್ ಲೈನ್ ಪ್ರಾರಂಭಿಸಿ ಪ್ರಚಾರ ನೀಡಿ, ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.
ಪೌಷ್ಟಿಕಾಂಶಯುಕ್ತ ಆಹಾರ ನೀಡಿ: ಅಂಗನವಾಡಿ ಕೇಂದ್ರಗಳಲ್ಲಿ ಮುಖ್ಯವಾಗಿ ನೀರಿನ ಸೌಲಭ್ಯ ಮತ್ತು ವಿದ್ಯುತ್ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆ ಇರುವ ಕಡೆ ತ್ವರಿತವಾಗಿ ಒದಗಿಸಬೇಕು. ಮಕ್ಕಳಲ್ಲಿ ಅಪೌಷ್ಟಿಕತೆ ಕಂಡುಬಂದರೆ ಆರೋಗ್ಯ ತಪಾಸಣೆ ನಡೆಸಿ ಪೌಷ್ಟಿಕಾಂಶಯುಕ್ತ ಆಹಾರ ಹಾಗೂ ಔಷಧಿಗಳನ್ನು ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುನಿಕೃಷ್ಣಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಟರಾಜ್.ಎಸ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಕೃಷ್ಣಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಪ್ಪೇಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ, ಲೀಡ್ ಬ್ಯಾಂಕ್‌ನ ವ್ಯವಸ್ಥಾಪಕ ಮಧುಸೂದನ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.