Advertisement

America: ಈಜಲು ತೆರಳಿ ನಾಪತ್ತೆಯಾಗಿದ್ದ ಭಾರತೀಯ ಯುವಕರ ಶವ ಪತ್ತೆ

07:38 PM Apr 23, 2023 | Team Udayavani |

ವಾಷಿಂಗ್ಟನ್‌: ಅಮೆರಿಕದ ಇಂಡಿಯಾನಾ ನಗರದಲ್ಲಿರುವ ಮನ್ರೊ ಸರೋವರದಲ್ಲಿ ಈಜಲು ತೆರಳಿ ನಾಪತ್ತೆಯಾಗಿದ್ದ ಇಬ್ಬರು ಭಾರತೀಯ ಮೂಲದ ಯುವಕರ ಶವ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಲ್ಲಿ ಸ್ಕೂಲ್‌ ಆಫ್ ಬಿಸಿನೆಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ಸಿದ್ಧಾಂತ್‌ ಶಾ ಹಾಗೂ ಆರ್ಯನ್‌ ವೈದ್ಯ ಎಂಬವರು ಏ.15ರಂದು ತಮ್ಮ ಗೆಳೆಯರ ಗುಂಪಿನೊಂದಿಗೆ ಈಜಲು ತೆರಳಿದ್ದರು. ಆದರೆ, ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಅಂದಿನಿಂದಲೂ ಶೋಧ ಕಾರ್ಯ ನಡೆಯುತ್ತಲೇ ಇದ್ದು, ಕೊನೆಗೆ ಈಗ ಇಬ್ಬರ ಶವವೂ ಪತ್ತೆಯಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಯುವಕರ ಸಾವಿಗೆ ಶಿಕ್ಷಣ ಮಂಡಳಿಯೂ ಸಂತಾಪ ಸೂಚಿಸಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next