Advertisement

ಅಮೆರಿಕ: ಕಡಿಮೆಯಾಗುತ್ತಿರುವ ಪ್ರಕರಣಗಳು

01:12 AM Aug 28, 2020 | mahesh |

ನ್ಯೂಯಾರ್ಕ್‌: ಅಮೆರಿಕದಲ್ಲಿ ಕೋವಿಡ್ ಸೋಂಕಿನ ಹೊಸ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಜನರು ಮುಖಗವಸು ಧರಿಸುತ್ತಿರುವುದು ಕೂಡ ಒಂದು ಪ್ರಮುಖ ಕಾರಣವಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಅಮೆರಿಕದಲ್ಲಿ ಪ್ರತಿನಿತ್ಯ ಸರಾಸರಿ 1,000 ಮಂದಿ ಕೋವಿಡ್‌ನಿಂದ ಸಾವಿಗೀಡಾಗುತ್ತಿದ್ದಾರೆ. ದೇಶದಾದ್ಯಂತ ಪ್ರತಿ ದಿನ 43,000 ಹೊಸ ಪ್ರಕರಣಗಳು ವರದಿಯಾಗುತ್ತಿವೆ.

Advertisement

ಆಗಸ್ಟ್‌ ತಿಂಗಳ ಆರಂಭಕ್ಕೆ ಹೋಲಿಸಿದರೆ ಈಗ ಹೊಸ ಪ್ರಕರಣಗಳ ಪ್ರಮಾಣದಲ್ಲಿ ಶೇ. 21ರಷ್ಟು ಇಳಿಕೆಯಾಗಿದೆ ಎಂದು ಜಾನ್ಸ್‌ ಹಾಪ್ಕಿನ್ಸ್‌ ವಿಶ್ವವಿದ್ಯಾಲಯ ಸಂಗ್ರಹಿಸಿದ ದತ್ತಾಂಶವು ಹೇಳಿದೆ. ಆದರೂ ಇತರ ದೇಶಗಳಿಗೆ ಹೋಲಿಸಿದರೆ ಇನ್ನೂ ಅಮೆರಿಕದಲ್ಲೇ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಅಮೆರಿಕ ಹೊರತುಪಡಿಸಿದರೆ, ಬ್ರೆಜಿಲಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. ಅಮೆರಿಕದ ಜನರಲ್ಲಿ ವೈರಸ್‌ ಹೇಗೆ ಹರಡುತ್ತದೆ ಎಂಬುದರ ಬಗ್ಗೆ ಅರಿವು ಮೂಡಿದೆ. ಹಾಗಾಗಿ ಅವರು ಹೆಚ್ಚಿನ ಸಮಯ ಮುಖಗವಸು ಧರಿಸಲು ಆರಂಭಿಸಿದ್ದಾರೆ.

ಕೋವಿಡ್‌ಗೆ ಔಷಧ ಲಸಿಕೆ ಎಷ್ಟು ಪರಿಣಾಮಕಾರಿ?
ಮಣಿಪಾಲ: ಲಸಿಕೆ ಶೇ. 80ರಷ್ಟು ಪರಿಣಾಮಕಾರಿ ಎಂದು ಸಾಬೀತಾದರೆ, ಮೊದಲಿನಂತೆಯೇ ಅದೇ ಸ್ಥಿತಿಗೆ ಮರಳುವುದು ಸುಲಭ. ಇದು ಸಾಧ್ಯವಾದಲ್ಲಿ ಸಾಂಕ್ರಾಮಿಕ ರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬಹುದಾಗಿದೆ. ಅಮೆರಿಕನ್‌ ಜರ್ನಲ್‌ ಆಫ್ ಪ್ರಿವೆಂಟಿವ್‌ ಮೆಡಿಸಿನ್‌ನಲ್ಲಿ ಪ್ರಕಟವಾದ ಸಂಶೋಧನೆಯ ಪ್ರಕಾರ, ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಲಸಿಕೆ ಎಷ್ಟು ಪರಿಣಾಮಕಾರಿಯಾಗಿರಬೇಕು ಎಂಬುದನ್ನು ಅರ್ಥಮಾಡಿಕೊಳ್ಳಲು ವಿಜ್ಞಾನಿಗಳು ಸಂಶೋಧನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next