Advertisement

ಅಮೆರಿಕಕ್ಕೆ ಆರ್ಥಿಕ ಹಿಂಜರಿತ ಸಮಸ್ಯೆ ಕಮ್ಮಿ

08:33 PM May 08, 2023 | Team Udayavani |

ದುಬೈ: ಅಮೆರಿಕದ ಅರ್ಥ ವ್ಯವಸ್ಥೆಗೆ ದೊಡ್ಡ ಪ್ರಮಾಣದ ಆರ್ಥಿಕ ಹಿಂಜರಿತ ಬಾಧಿಸುವ ಸಾಧ್ಯತೆ ಕಡಿಮೆ ಎಂದು ಸ್ಟಾಂಡರ್ಡ್‌ ಚಾರ್ಟರ್ಡ್‌ ಬ್ಯಾಂಕ್‌ನ ಸಿಇಒ ಬಿಲ್‌ ವಿಂಟರ್ಸ್‌ ಅಭಿಪ್ರಾಯಪಟ್ಟಿದ್ದಾರೆ. ಆದರೆ ಋಣಾತ್ಮಕ ಬೆಳವಣಿಗೆ ದಾಖಲಾಗುವ ಸಾಧ್ಯತೆ ಅಧಿಕವಾಗಿದೆ ಎಂದು ಹೇಳಿದ್ದಾರೆ. ದುಬೈನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಮೆರಿಕದ ಅರ್ಥ ವ್ಯವಸ್ಥೆ ಸದೃಢವಾಗಿದೆ. ಆದರೆ ಹಣದುಬ್ಬರ ಮತ್ತು ಬಡ್ಡಿದರ ಏರಿಕೆಯ ಪ್ರಮಾಣ ಬಾಧಿತವಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಸ್ಟಾಂಡರ್ಡ್‌ ಚಾರ್ಟರ್ಡ್‌ ಬ್ಯಾಂಕ್‌ನ ಕ್ರೆಡಿಟ್‌ ಕಮಿಟಿ ಕೂಡ ಹೆಚ್ಚು ಪ್ರಬಲವಾಗಿಲ್ಲ ಎಂದು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next