ವಾಷಿಂಗ್ಟನ್ ಡಿ.ಸಿ: ಅಮೆರಿಕಾದ 244ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸಿದದ್ದು, ಪ್ರತಿಯಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಧನ್ಯವಾದ ಅರ್ಪಿಸಿದ್ದಾರೆ.
ಶನಿವಾರ ಪ್ರಧಾನಿ ಮೋದಿ ಟ್ವೀಟ್ ಮಾಡಿ “ಅಮೆರಿಕಾದ 244ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಡೊನಾಲ್ಡ್ ಟ್ರಂಪ್ ಮತ್ತು ಅಮೆರಿಕಾದ ಜನರನ್ನು ಅಭಿನಂದಿಸಿದ್ದರು. ಅದರ ಜೊತೆಗೆ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರಗಳಾಗಿ, ಈ ದಿನ ಆಚರಿಸುವ ಸ್ವಾತಂತ್ರ್ಯ ದಿನವನ್ನು ನಾವು ಗೌರವಿಸುತ್ತೇವೆ ಎಂದಿದ್ದರು.
ಇದಕ್ಕೆ ಡೋನಾಲ್ಡ್ ಟ್ರಂಪ್ ಪ್ರತಿಕ್ರಿಯೆ ನೀಡಿದ್ದು, ಧನ್ಯವಾದಗಳು ಸ್ನೇಹಿತ. ಅಮೆರಿಕ ಭಾರತವನ್ನು ಪ್ರೀತಿಸುತ್ತದೆ (Thank you my friend. America loves India) ಎಂದಿದ್ದಾರೆ.
Thank you my friend. America loves India! https://t.co/mlvJ51l8XJ
Related Articles
— Donald J. Trump (@realDonaldTrump) July 4, 2020
ದಕ್ಷಿಣ ಡಕೋಟದಲ್ಲಿ ಜುಲೈ 4ರಂದು ನಡೆದ ಅಮೆರಿಕಾ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಡೊನಾಲ್ಡ್ ಟ್ರಂಪ್ ಭಾಗಿಯಾಗಿದ್ದರು ಎಂದು ವರದಿಯಾಗಿದೆ.
ಭಾರತದ ಅಮೆರಿಕಾ ರಾಯಭಾರಿ ಕೆನ್ನೆತ್ ಐ ಜಸ್ಟರ್ ಅವರು ಕೂಡ ದೇಶದ 244 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಅಮೆರಿಕನ್ನರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.