Advertisement

ಅಮೆರಿಕ; ಮಾಸ್ಕ್ ಮಾಯ, ಆರೋಗ್ಯ ಅಧಿಕಾರಿಗಳು ಪ್ರತ್ಯಕ್ಷ

01:44 PM Aug 31, 2020 | Nagendra Trasi |

ವಾಷಿಂಗ್ಟನ್‌: ಕೋವಿಡ್ 19 ಸೋಂಕು ನಿಯಂತ್ರಣಕ್ಕಾಗಿ ವಿಧಿಸಿರುವ ಸುರಕ್ಷತಾ ಕ್ರಮಗಳು ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಭರಾಟೆಯಲ್ಲಿ ಕಾಣೆಯಾಗುತ್ತಿರುವ ಕುರಿತು ಅನುಮಾನಗಳು ಹೆಚ್ಚಾಗಿವೆ.

Advertisement

ಈ ಕುರಿತಂತೆ ಆತಂಕ ವ್ಯಕ್ತಪಡಿಸಿರುವ ಅಮೆರಿಕದ ಆರೋಗ್ಯ ತಜ್ಞರು ರಿಪಬ್ಲಿಕನ್‌ ಪಕ್ಷದ ಸಮಾವೇಶಗಳಲ್ಲಿ ಹೆಚ್ಚಾಗಿ ಕೋವಿಡ್‌ ಸುರಕ್ಷತಾ ಕ್ರಮಗಳನ್ನು ಕಡೆಗಣಿಸಲಾಗುತ್ತಿದೆ. ಇದರಿಂದ ಸೋಂಕು ವ್ಯಾಪಕವಾಗಿ ಹರಡುವ ಸಾಧ್ಯತೆ ಹೆಚ್ಚಿದೆ ಎಂದಿದ್ದಾರೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರನ್ನು ಅಧ್ಯಕ್ಷೀಯ ಸ್ಥಾನದ ಅಭ್ಯರ್ಥಿಯಾಗಿ ಅಧಿಕೃತವಾಗಿ ಘೋಷಿಸಿದ ಸಮಾವೇಶದಲ್ಲಿ 1500 ಅತಿಥಿಗಳು ಪಾಲ್ಗೊಂಡಿದ್ದರು. ಈ ಸಮಾವೇಶದಲ್ಲಿ ಬಹಳಷ್ಟು ಮಂದಿ ಮಾಸ್ಕ್ ಧರಿಸಿರಲಿಲ್ಲ ಎಂದು ಹೇಳಲಾಗುತ್ತಿದೆ. ಮಾಸ್ಕ್ ಇಲ್ಲದೇ ಸಾಮಾಜಿಕ ಅಂತರವನ್ನೂ ಕಾಪಾಡಿಕೊಂಡಿಲ್ಲ.

ಈ ಹಿನ್ನೆಲೆಯಲ್ಲಿ ಸಭೆಯಲ್ಲಿ ಭಾಗಿಯಾದ ಕೆಲವರಿಗಾದರೂ ಕೋವಿಡ್‌ 19 ವೈರಸ್‌ ಸೋಂಕು ತಗುಲಿರುವ ಸಾಧ್ಯತೆ ಇದೆ‌ ಎಂದು ಜಾರ್ಜ್‌ ವಾಷಿಂಗ್ಟನ್‌ ವಿಶ್ವವಿದ್ಯಾಲಯದ ತುರ್ತು ವೈದ್ಯಕೀಯ ಮತ್ತು ಸಾರ್ವಜನಿಕ ಆರೋಗ್ಯ ವಿಭಾಗದ ಪ್ರಾಧ್ಯಾಪಕ ಡಾ|ಲಿಯೇನಾ ವೆನ್‌ ಕಳವಳ ವ್ಯಕ್ತಪಡಿಸಿದ್ದಾರೆ.

ಟ್ರಂಪ್‌ ಪಾಲ್ಗೊಂಡ ಈ ಸಮಾವೇಶದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ವಿಧಿಸಿರುವ ಸುರಕ್ಷತಾ ಕ್ರಮಗಳನ್ನು ಉಲ್ಲಂಘಿಸಲಾಗಿತ್ತು. ಈ ವೇಳೆ ಆರೋಗ್ಯ ಇಲಾಖೆಯವರು ಭೇಟಿ ನೀಡಿ ಮಾಸ್ಕ್ ಧರಿಸಬೇಕೆಂದು ಸೂಚನೆ ನೀಡಿದ್ದಾರೆ. ಈ ಸೂಚನೆ ನೀಡಿದ ಬಳಿಕ ಸಮಾವೇಶದಲ್ಲಿದ್ದ ಕೆಲವರು ಮಾಸ್ಕ್ ಧರಿಸಿದ್ದಾಗಿ “ದಿ ವಾಷಿಂಗ್ಟನ್‌ ಪೋಸ್ಟ್‌’ ವರದಿ ಮಾಡಿದೆ.

Advertisement

ಕ್ಯಾನ್ಸರ್‌ ರೋಗಿಗಳಿಗೆ ಕೋವಿಡ್‌ ಕಾಟ

ಮಣಿಪಾಲ: 2025ರ ವೇಳೆಗೆ ದೇಶದಲ್ಲಿ ಕ್ಯಾನ್ಸರ್‌ ಪೀಡಿತರ ಸಂಖ್ಯೆ ಸುಮಾರು 15.7 ಲಕ್ಷ ಆಗಲಿದೆ ಎಂದು ವರದಿಯೊಂದು ಹೇಳಿದೆ. ಕೋವಿಡ್‌ ಸಾಂಕ್ರಾಮಿಕ ಬಿಕ್ಕಟ್ಟಿನಿಂದಾಗಿ ಪ್ರಸ್ತುತ ಕ್ಯಾನ್ಸರ್‌ ರೋಗಿಗಳು ಹೆಚ್ಚಿನ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೋವಿಡ್‌ ಸೋಂಕು ಹರಡುವಿಕೆಯ ಭೀತಿಯಿಂದಾಗಿ ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳಲ್ಲಿ ಕ್ಯಾನ್ಸರ್‌ ಚಿಕಿತ್ಸೆಗಳನ್ನು ನೀಡಲಾಗುತ್ತಿಲ್ಲ ಎಂದು ವರದಿ ಹೇಳಿದೆ.

ಅಮೆರಿಕದ ನ್ಯೂಯಾರ್ಕ್‌ನ ಮಾಂಟೊರ್‌ ವೈದ್ಯಕೀಯ ಕೇಂದ್ರದಲ್ಲಿ ಸೋಂಕಿಗೆ ಒಳಗಾದ 218 ಕ್ಯಾನ್ಸರ್‌ ರೋಗಿಗಳನ್ನು ತಜ್ಞರು ಅಧ್ಯಯನ ಮಾಡಿದ್ದು, ಮಾರ್ಚ್‌ 18 ಮತ್ತು ಎಪ್ರಿಲ್‌ 8ರ ನಡುವೆ 61 ಕ್ಯಾನ್ಸ್‌ರ್‌ ರೋಗಿಗಳು ಕೋವಿಡ್‌ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಅಧ್ಯಯನ ವರದಿಯಿಂದ ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next