Advertisement

ಭಾರೀ ಇಳಿಕೆ: ಭಾರತದಲ್ಲಿ 24 ಗಂಟೆಯಲ್ಲಿ 975 ಕೋವಿಡ್ ಪ್ರಕರಣ ಪತ್ತೆ, 4 ಮಂದಿ ಸಾವು

10:59 AM Apr 16, 2022 | Team Udayavani |

ನವದೆಹಲಿ: ಭಾರತದಲ್ಲಿ ಕೋವಿಡ್ 19 ಸೋಂಕಿನ ನಾಲ್ಕನೇ ಅಲೆಯ ಭೀತಿಯ ನಡುವೆಯೇ ಭಾರೀ ಪ್ರಮಾಣದಲ್ಲಿ ಕೋವಿಡ್ ಪ್ರಕರಣ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 975 ಕೋವಿಡ್ ಪ್ರಕರಣ ವರದಿಯಾಗಿದ್ದು, 4 ಮಂದಿ ಸಾವನ್ನಪ್ಪಿರುವುದಾಗಿ ಶನಿವಾರ(ಏಪ್ರಿಲ್ 16) ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 11,366ಕ್ಕೆ ಇಳಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 175 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ಒಂದೇ ದಿನದಲ್ಲಿ 796 ಮಂದಿ ಗುಣಮುಖರಾಗಿದ್ದಾರೆ. ಇದರೊಂದಿಗೆ ಕೋವಿಡ್ ನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 4,25,07,834ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಕೋವಿಡ್ 19 ಚೇತರಿಕೆ ದರ ಶೇ.98.76ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.0.32 ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.0.26ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶಾದ್ಯಂತ ಮುಂದುವರಿದಿರುವ ಕೋವಿಡ್ 19 ಲಸಿಕೆ ಅಭಿಯಾನದಲ್ಲಿ ಈವರೆಗೆ 186.38 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಕಳೆದ 24ಗಂಟೆಯಲ್ಲಿ ಸುಮಾರು 3,00,91 ಲಕ್ಷ ಕೋವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next