Advertisement

ಒಂದೇ ದಿನದಲ್ಲಿ ದಾಖಲೆ ಪ್ರಮಾಣದ ಇಳಿಕೆ; ಭಾರತದಲ್ಲಿ 6,822 ಕೋವಿಡ್ ಸೋಂಕು ಪ್ರಕರಣ ಪತ್ತೆ

11:07 AM Dec 07, 2021 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 6,822 ಕೋವಿಡ್ ಸೋಂಕು ಪ್ರಕರಣ ದೃಢಪಟ್ಟಿದ್ದು, ಇದು 558 ದಿನಗಳಲ್ಲಿನ ಕನಿಷ್ಠ ಪ್ರಮಾಣದ್ದಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ (ಡಿಸೆಂಬರ್ 07) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಒಮಿಕ್ರಾನ್ ಹೆಚ್ಚಳದ ಆತಂಕ; ಭಾರತದಲ್ಲಿ ಫೆಬ್ರುವರಿಯಲ್ಲಿ 3ನೇ ಅಲೆ ಸಾಧ್ಯತೆ: ಐಐಟಿ ವಿಜ್ಞಾನಿ

ಭಾರತದಲ್ಲಿ ಒಂದೇ ದಿನದಲ್ಲಿ 6,822 ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, ಕೇರಳದಲ್ಲಿ ದಾಖಲೆಯ ಪ್ರಮಾಣದಲ್ಲಿ 3,277 ಸೋಂಕು ಪ್ರಕರಣ ವರದಿಯಾಗಿದೆ ಎಂದು ಅಂಕಿಅಂಶದಲ್ಲಿ ಹೇಳಿದೆ.

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 95,014ಕ್ಕೆ ಇಳಿಕೆಯಾಗಿದ್ದು, 554 ದಿನಗಳಲ್ಲಿನ ಕನಿಷ್ಠದ್ದಾಗಿದೆ. ಮತ್ತೊಂದೆಡೆ ಕಳೆದ 24ಗಂಟೆಗಳಲ್ಲಿ 10,004 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಭಾರತದಲ್ಲಿನ ಕೋವಿಡ್ ಚೇತರಿಕೆ ಪ್ರಮಾಣ ಶೇ.98.36ರಷ್ಟಿದೆ.

ಕಳೆದ 24ಗಂಟೆಗಳಲ್ಲಿ ಭಾರತದಲ್ಲಿ ಕೋವಿಡ್ ನಿಂದ 220 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ದೇಶದಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4,73,757ಕ್ಕೆ ಏರಿಕೆಯಾಗಿದೆ. ಕೇರಳದಲ್ಲಿ ಒಂದೇ ದಿನ 168 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next