ನವದೆಹಲಿ: ಕೋವಿಡ್ ನಾಲ್ಕನೇ ಅಲೆಯ ವರದಿಯ ಬೆನ್ನಲ್ಲೇ ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,075 ಕೋವಿಡ್ ಪ್ರಕರಣ ವರದಿಯಾಗಿದೆ. 71 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಮಾರ್ಚ್ 19) ಬಿಡುಗಡೆಗೊಳಿಸಿರುವ ಅಂಕಿಅಂಶ ತಿಳಿಸಿದೆ.
ಇದನ್ನೂ ಓದಿ:ಭೀಕರ ಬಸ್ ಅಪಘಾತ: ನಾಲ್ವರು ಸಾವು; 20 ಅಧಿಕ ಮಂದಿ ಗಂಭೀರ
ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 27,802ಕ್ಕೆ ಇಳಿಕೆಯಾಗಿದೆ. ದೇಶಾದ್ಯಂತ ಈವರೆಗೆ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 5,16,352ಕ್ಕೆ ಏರಿಕೆಯಾಗಿದೆ.
ಕಳೆದ 24ಗಂಟೆಯಲ್ಲಿ 1,379 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಒಂದೇ ದಿನದಲ್ಲಿ 3,383 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ಭಾರತದಲ್ಲಿ ಈವರೆಗೆ ಒಟ್ಟು 4,24,61,926 ಮಂದಿ ಗುಣಮುಖರಾಗಿದ್ದಾರೆ.
ಕೋವಿಡ್ 19 ಚೇತರಿಕೆ ದರ ಶೇ.98.73ರಷ್ಟಿದೆ. ಕೋವಿಡ್ 19 ಲಸಿಕೆ ಅಭಿಯಾನದಲ್ಲಿ ದೇಶಾದ್ಯಂತ ಈವರೆಗೆ 181.04 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.