ರೋಹ್ಟಕ್:ಭಾರತದಲ್ಲಿ ಕೋವಿಡ್ 19 ಮಾರಣಾಂತಿಕ ಎರಡನೇ ಅಲೆ ಕ್ಷಿಪ್ರವಾಗಿ ಹರಡುತ್ತಿರುವ ನಡುವೆಯೇ ಹರ್ಯಾಣದ ರೋಹ್ಟಕ್ ನಲ್ಲಿ ಕಳೆದ 10 ದಿನಗಳಲ್ಲಿ ನಿಗೂಢ ಜ್ವರಕ್ಕೆ 25ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ.
ಇದನ್ನೂ ಓದಿ:ಮಹಾರಾಷ್ಟ್ರ ಮಾಜಿ ಸಚಿವ ಅನಿಲ್ ದೇಶಮುಖ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ ED
ರೋಹ್ಟಕ್ ನ ಟಿಟೋಳಿ ಗ್ರಾಮದಲ್ಲಿ ಈ ಆಘಾತಕಾರಿ ಸಾವಿನ ಘಟನೆ ಸಂಭವಿಸಿದ್ದು, ಜಿಲ್ಲಾಡಳಿತ ಈ ಗ್ರಾಮವನ್ನು ಸೀಲ್ಡ್ ಮಾಡಿರುವುದಾಗಿ ವರದಿ ತಿಳಿಸಿದೆ. ಗ್ರಾಮದಲ್ಲಿನ ನಿಗೂಢ ಸಾವಿನ ಬಗ್ಗೆ ರೋಹ್ಟಕ್ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ತನಿಖೆ ನಡೆಸುತ್ತಿದೆ.
ನಿಗೂಢ ಜ್ವರಕ್ಕೆ 28ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ನಿಗೂಢ ಜ್ವರ ನೆರೆಯ ಗ್ರಾಮಗಳಿಗೆ ಹರಡದಿರಲು ಮುಂಜಾಗ್ರತಾ ಕ್ರಮವಾಗಿ ಇಡೀ ಗ್ರಾಮವನ್ನೇ ಕಂಟೈನ್ ಮೆಂಟ್ ಜೋನ್ ಎಂದು ಘೋಷಿಸಲಾಗಿದೆ.
ಸ್ಥಳೀಯ ಗ್ರಾಮಸ್ಥರ ಹೇಳಿಕೆ ಪ್ರಕಾರ, ಕಳೆದ ಎರಡು ದಿನಗಳಲ್ಲಿ ಕಾಣಿಸಿಕೊಂಡ ಜ್ವರಕ್ಕೆ ಯುವಕರು ಸೇರಿದಂತೆ 40ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಏಕಾಏಕಿ ಸಂಭವಿಸಿದ ಸಾವಿನ ದುರಂತ ಪ್ರಕರಣದಿಂದ ಗ್ರಾಮಸ್ಥರು ಭೀತಿಗೆ ಒಳಗಾಗಿರುವುದಾಗಿ ವರದಿ ತಿಳಿಸಿದೆ.
ಆದರೆ ಈ ಸಾವು ಸಂಭವಿಸಲು ಕೋವಿಡ್ 19 ಸೋಂಕು ಕಾರಣವಾಗಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಶವಗಳ ಮರಣೋತ್ತರ ಪರೀಕ್ಷೆ ಮತ್ತು ತನಿಖೆ ಮುಂದುವರಿದಿದ್ದು, ಈ ಸಾವಿಗೆ ಏನು ಕಾರಣ ಎಂಬುದು ಪತ್ತೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.