Advertisement

ಅಮೀನಗಡ:ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಿ- ರಾಜಶೇಖರ

06:06 PM Jul 08, 2023 | Team Udayavani |

ಅಮೀನಗಡ: ವಿದ್ಯಾರ್ಥಿಗಳು ತಮ್ಮ ಉಜ್ವಲ ಭವಿಷ್ಯವನ್ನು ನಿರ್ಮಿಸಿಕೊಳ್ಳಲು ನಿರಂತರವಾಗಿ ಅಧ್ಯಯನಶೀಲರಾಗಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜಶೇಖರ ಎನ್‌.ಪಟ್ಟಣಶೆಟ್ಟಿ ಹೇಳಿದರು.

Advertisement

ಪಟ್ಟಣದ ಪ್ರಭುಶಂಕರೇಶ್ವರ ಅನುಭವ ಮಂಟಪದಲ್ಲಿ ಸಂಗಮೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜು ಆಯೋಜಿಸಿದ್ದ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಗಳ ಉದ್ಘಾಟನೆ ಸಮಾರಂಭ ಹಾಗೂ ಪಿಯು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಶಿಕ್ಷಣಕ್ಕೆ ಒತ್ತು ನೀಡಬೇಕಿದೆ. ಶಿಕ್ಷಣ ಭವಿಷ್ಯ ರೂಪಿಸಬಲ್ಲದು ಎಂದರು.

ಪ್ರಭುಶಂಕರೇಶ್ವರ ಗಚ್ಚಿನಮಠದ ಶಂಕರರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಂಗಮೇಶ್ವರ ವಿದ್ಯಾವರ್ಧಕ
ಸಂಘದ ಚೇರಮನ್‌ ಆಯ್‌.ಎಸ್‌.ಲಿಂಗದಾಳ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಚಾರ್ಯ ಎಂ.ಎನ್‌.ವಂದಾಲ ಅಧ್ಯಕ್ಷತೆ ವಹಿಸಿದ್ದರು.

ಇದೇ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜಶೇಖರ ಎನ್‌ .ಪಟ್ಟಣಶೆಟ್ಟಿ, ಜಾನಪದ ಸಾಹಿತಿ ಡಾ|ಸಿದ್ದಪ್ಪ ಕುರಿ ಅವರನ್ನು ಸನ್ಮಾನಿಸಲಾಯಿತು. ಜಾನಪದ ಸಾಹಿತಿ ಡಾ| ಸಿದ್ದಪ್ಪ ಕುರಿ, ಸಂಗಮೇಶ್ವರ ಪದವಿ ಪೂರ್ವ ಕಾಲೇಜಿನ ಚೇರಮನ್ನ ಸಿ.ಡಿ.ಇಳಕಲ್‌, ಉಪಪ್ರಾಚಾರ್ಯ ಆರ್‌.ಜಿ.ಸನ್ನಿ, ಸರ್ಕಾರಿ ಬಾಲಕಿಯ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಪ್ರಕಾಶ ಬೇವೂರ, ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥ ಎಮ್‌. ಎಸ್‌.ಕಾರಭಾರಿ, ಉಪನ್ಯಾಸಕ ಜಿ.ಎಮ್‌. ಡೊಳ್ಳಿನ, ಶಿವಪ್ಪ, ಶಿವುಕುಮಾರ ಹಿರೇಮಠ, ಕಾರ್ಯಕ್ರಮಾಧಿಕಾರಿ ಜಿ.ಬಿ.ಅವದಾನಿ, ಎಮ್‌.ಎಚ್‌. ಶೇಬಣ್ಣವರ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next