Advertisement
ದಿಲ್ಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (ಡಿಡಿಸಿಎ) ಮುಖ್ಯಸ್ಥರಾಗಿರುವ ಅಮಿತ್ ಭಂಡಾರಿ ಮೇಲೆ 15ಕ್ಕೂ ಹೆಚ್ಚು ಮಂದಿ ಸೇರಿಕೊಂಡು ಹಲ್ಲೆ ನಡೆಸಿದ್ದರು. ಅಮಿತ್ ತಲೆ ಮತ್ತು ಕಿವಿಗೆ ಗಂಭೀರ ಗಾಯವಾಗಿತ್ತು. ಸದ್ಯ ಅವರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ ಅನುಜ್ ದೆದಾ ಹಾಗೂ ಆತನ ಸಹೋದರ ನರೇಶ್ ಅವರನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ. ಮತ್ತಷ್ಟು ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಲಿದ್ದೇವೆ ಎಂದು ದಿಲ್ಲಿಯ ಹೆಚ್ಚುವರಿ ಪೊಲೀಸ್ ಆಯುಕ್ತ ನೂಪುರ್ ಪ್ರಸಾದ್ ತಿಳಿಸಿದ್ದಾರೆ. ಇದೇ ವೇಳೆ ಕ್ರಿಕೆಟಿಗರಾದ ಶಿಖರ್ ಧವನ್, ಗೌತಮ್ ಗಂಭೀರ್, ವೀರೇಂದ್ರ ಸೆಹವಾಗ್ ಘಟನೆಯನ್ನು ಖಂಡಿಸಿದ್ದಾರೆ. ತಪ್ಪಿತಸ್ಥರಿಗೆ ಕಠಿನ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದಾರೆ.
ಮಾಜಿ ಕ್ರಿಕೆಟಿಗ ಅಮಿತ್ ಭಂಡಾರಿ ಮೇಲಿನ ಹಲ್ಲೆ ಪ್ರಕರಣದಲ್ಲಿ ದಿಲ್ಲಿ ಪೊಲೀಸರು ಅಂಡರ್-23 ಕ್ರಿಕೆಟಿಗ ಅನುಜ್ ದೆದಾØಗೆ ನಿಷೇಧ ಹೇರುವ ಸಾಧ್ಯತೆಗಳಿವೆ.
“ಹಲ್ಲೆ ನಡೆಸಿದ ಆಟಗಾರರಿಗೆ ನಿಷೇಧ ಹೇರಬೇಕು ಎನ್ನುವ ವೀರೇಂದ್ರ ಸೆಹವಾಗ್ ಹಾಗೂ ಗೌತಮ್ ಗಂಭೀರ್ ಅವರ ಅನಿಸಿಕೆಯನ್ನು ನಾನು ಒಪ್ಪಿಕೊಳ್ಳುತ್ತೇನೆ. ಈಗಾಗಲೇ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು ಆದಷ್ಟು ಬೇಗ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಡಿಡಿಸಿಎ ಅಧ್ಯಕ್ಷ ರಜತ್ ಶರ್ಮ ಹೇಳಿದ್ದಾರೆ.