Advertisement
ಅಮೃತ್‌ಪೌಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ನ್ಯಾ.ಎಚ್.ಜಿ.ರಮೇಶ್ ಹಾಗೂ ನ್ಯಾ. ಪಿ.ಎಂ.ನವಾಜ್ ಅವರಿದ್ದ ವಿಭಾಗೀಯ ಪೀಠ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ರಾಜ್ಯಸರ್ಕಾರಕ್ಕೆ ಕಾಲಾವಕಾಶ ನೀಡಿ ವಿಚಾರಣೆಯನ್ನು ಜುಲೈ 5ಕ್ಕೆ ಮುಂದೂಡಿತು.
ಹೆಸರೂ ಇತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಕೇಂದ್ರ ವಲಯ ಐಜಿಪಿ ಹುದ್ದೆಯಿಂದ ಬೆಂಗಳೂರು ಆಡಳಿತ ವಿಭಾಗದ ಐಜಿಪಿ ಹುದ್ದೆಗೆ ವರ್ಗಾವಣೆಗೊಳಿಸಿ ರಾಜ್ಯಸರ್ಕಾರ ಮಾ. 9ರಂದು ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅಮೃತ್ ಪೌಲ್ ಸಿಎಟಿ ಮೊರೆ ಹೋಗಿದ್ದರಾದರೂ ಅದು ಸರ್ಕಾರದ ಆದೇಶವನ್ನು ಎತ್ತಿಹಿಡಿದಿತ್ತು. ಈಗ ಹೈಕೋರ್ಟ್ ಮೊರೆ ಹೋಗಿರುವ ಅಮೃತ್ ಪೌಲ್ ಯಾವುದೇ ಕರ್ತವ್ಯ ಲೋಪವೆಸಗಿಲ್ಲ. ಪುನಃ ಕೇಂದ್ರ ವಲಯ ಐಜಿಪಿಯಾಗಿ ಮುಂದುವರಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಅಮೃತ್ ಪೌಲ್ ಅರ್ಜಿಯಲ್ಲಿ ಕೋರಿದ್ದಾರೆ.