Advertisement

Live Updates-ಕಾಶ್ಮೀರದಲ್ಲಿ ಏನಾಗ್ತಿದೆ? ಜಮ್ಮುಕಾಶ್ಮೀರದ ವಿಶೇಷ ಸ್ಥಾನಮಾನ, 370 ರದ್ದು

10:27 AM Aug 26, 2020 | Nagendra Trasi |

ನವದೆಹಲಿ:ಜಮ್ಮು-ಕಾಶ್ಮೀರದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆ ಅಂತ್ಯವಾಗಿದೆ ಎಂದು ವರದಿ ತಿಳಿಸಿದೆ.

Advertisement

ಪ್ರಧಾನಿ ಮೋದಿ ಅವರ ಸರಕಾರಿ ನಿವಾಸದಲ್ಲಿ ಮಹತ್ವದ ಸಭೆ ಆರಂಭಗೊಂಡಿದ್ದು, ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ವಿದೇಶಾಂಗ ಸಚಿವ ಎಸ್.ಜೈಶಂಕರ್ ಪಾಲ್ಗೊಂಡಿದ್ದಾರು.

ಏನು? ಜಮ್ಮು-ಕಾಶ್ಮೀರದ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ನೀಡಲಿರುವ ಹೇಳಿಕೆ ಮೇಲೆ ಇಡೀ ದೇಶದ ಚಿತ್ತ ನೆಟ್ಟಿದೆ. ಈ ಹಿನ್ನೆಲೆಯಲ್ಲಿ ಕ್ಷಣ, ಕ್ಷಣದ ಮಾಹಿತಿ ಇಲ್ಲಿದೆ.

ಉತ್ತರ ಭಾರತದ ರಾಜ್ಯಗಳಲ್ಲಿ ಹೈಅಲರ್ಟ್ ಅನ್ನು ಘೋಷಿಸುವಂತೆ ಕೇಂದ್ರ ಸರಕಾರ ರಾಜ್ಯಗಳಿಗೆ ಸೂಚಿಸಿದೆ. ಏತನ್ಮಧ್ಯೆ ಜಮ್ಮು-ಕಾಶ್ಮೀರದಲ್ಲಿ ಭಾನುವಾರ ತಡರಾತ್ರಿ ನಡೆದ ಬೆಳವಣಿಗೆಯಲ್ಲಿ ಪ್ರಮುಖ ರಾಜಕೀಯ ನಾಯಕರಾದ ಮೆಹಬೂಬಾ ಮುಫ್ತಿ, ಒಮರ್ ಅಬ್ದುಲ್ಲಾ, ಸಜ್ಜದ್ ಲೋನ್, ಉಸ್ಮಾನ್ ಮಜೀದ್ ಸೇರಿದಮತೆ ಪ್ರಮುಖರನ್ನು ಗೃಹ ಬಂಧನದಲ್ಲಿ ಇರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next