Advertisement

Biporjoy cyclone; 8,000 ಕೋಟಿ ಮೌಲ್ಯದ ವಿಪತ್ತು ನಿರ್ವಹಣೆಗಾಗಿ ಮೂರು ಯೋಜನೆ ಘೋಷಣೆ

04:03 PM Jun 13, 2023 | Team Udayavani |

ನವದೆಹಲಿ: ಬಿಪೋರ್​​ಜಾಯ್​​​ ಚಂಡಮಾರುತ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ 8,000 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ವಿಪತ್ತು ನಿರ್ವಹಣೆಗಾಗಿ ಮೂರು ಪ್ರಮುಖ ಯೋಜನೆಗಳನ್ನು ಘೋಷಿಸಿದ್ದಾರೆ.

Advertisement

ವಿಪತ್ತು ನಿರ್ವಹಣೆ ಬಗ್ಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಚಿವರ ಜತೆ ಸಭೆ ನಡೆಸಿದ ಮಾತನಾಡಿದ ಅವರು, “ರಾಜ್ಯಗಳಲ್ಲಿ ಅಗ್ನಿಶಾಮಕ ಸೇವೆಗಳನ್ನು ವಿಸ್ತರಿಸಲು ಮತ್ತು ಆಧುನೀಕರಿಸಲು ಒಟ್ಟು ರೂ 5,000 ಕೋಟಿ ಯೋಜನೆ, ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಏಳು ಮಹಾನಗರಗಳಾದ ಮುಂಬೈ, ಚೆನ್ನೈ, ಕೋಲ್ಕತ್ತಾ ಬೆಂಗಳೂರು, ಹೈದರಾಬಾದ್, ಅಹಮದಾಬಾದ್ ಮತ್ತು ಪುಣೆಗೆ ರೂ 2,500 ಕೋ.ರೂ. ಹಣ ಅನುದಾನ ಯೋಜನೆ ಮತ್ತು ನಗರ ಪ್ರವಾಹದ ಅಪಾಯವನ್ನು ಕಡಿಮೆ ಮಾಡಲು ಮತ್ತು ಭೂಕುಸಿತವನ್ನು ತಗ್ಗಿಸಲು 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 825 ಕೋ. ರೂ.ಗಳ ಯೋಜನೆಯನ್ನು ಗೃಹ ಸಚಿವರು ಘೋಷಿಸಿದ್ದಾರೆ.


ಚಂಡಮಾರುತದ ಸನ್ನದ್ಧತೆಯ ಬಗ್ಗೆ ವಿವರಿಸಿದ್ದು, ವಿಪತ್ತು ನಿಭಾಯಿಸಲು ಸರ್ಕಾರ ಸಂಪೂರ್ಣವಾಗಿ ಸನ್ನದ್ಧವಾಗಿದೆ ಎಂದು ಹೇಳಿದರು.

ಕಳೆದ 9 ವರ್ಷಗಳಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯಗಳು ಈ ಕ್ಷೇತ್ರದಲ್ಲಿ ಸಾಕಷ್ಟು ಸಾಧಿಸಿವೆ ಅದನ್ನು ಯಾರೂ ಅಲ್ಲಗಳೆಯುವಂತಿಲ್ಲ. ಆದರೆ ನಾವು ಹೀಗೆ ಇರುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ವಿಪತ್ತುಗಳು ಅವುಗಳ ಸ್ವರೂಪವನ್ನು ಬದಲಾಯಿಸಿವೆಅವುಗಳ ಆವರ್ತನ ಮತ್ತು ತೀವ್ರತೆಯು ಹೆಚ್ಚಾಗಿದೆ. ನಾವು ಹೆಚ್ಚು ವ್ಯಾಪಕವಾದ ಯೋಜನೆಯನ್ನು ಮಾಡಬೇಕಾಗಿದೆ ಎಂದು ಹೇಳಿದರು.

ಅದೇ ವೇಳೆ ಪರಮಾಣು ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸುವ ರಾಜ್ಯಗಳಿಗೆ ಯಾವುದೇ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಅನುಸರಿಸಲು ಕಟ್ಟುನಿಟ್ಟಾದ ಪ್ರೋಟೋಕಾಲ್ ನೀಡಲಾಗಿದೆ ಎಂದು ಅವರು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next