Advertisement

ರೈತರ ಭಿನ್ನಾಭಿಪ್ರಾಯ ಪರಿಹಾರ

12:06 AM Dec 05, 2021 | Team Udayavani |

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ಬಳಿಯ ಸಿಂಘು ಗಡಿಯಲ್ಲಿ ಕಳೆದ ಒಂದೂವರೆ ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದ ರೈತರಲ್ಲಿ ಭಿನ್ನಾಭಿಪ್ರಾಯಗಳು ಕಾಣಿಸಿಕೊಂಡಿದ್ದು, ಅನಂತರ ನಡೆದ ಮಾತುಕತೆಯಲ್ಲಿ ಅದು ಬಗೆಹರಿದಿದೆ ಎಂದು ಮೂಲಗಳು ತಿಳಿಸಿವೆ.

Advertisement

ವಿವಾದಿತ ಕೃಷಿ ಕಾಯ್ದೆಗಳನ್ನು ಕೇಂದ್ರ ಸರಕಾರ ಹಿಂಪಡೆದಿದೆ. ಜತೆಗೆ ಸಂಧಾನಕ್ಕಾಗಿ ರೈತರನ್ನು ಕೇಂದ್ರ ಆಹ್ವಾನಿಸಿದೆ. ಹಾಗಾಗಿ ಪ್ರತಿಭಟನೆಯನ್ನು ಅಂತ್ಯಗೊಳಿಸಿ ಮನೆಗಳಿಗೆ ತೆರಳಲು ಹರಿಯಾಣ ಭಾಗದ ರೈತರು ನಿರ್ಧರಿಸಿದ್ದಾರೆ. ಆದರೆ ಇದನ್ನು ಒಪ್ಪದ ಸಂಯುಕ್ತ ಕಿಸಾನ್‌ ಮೋರ್ಚಾ (ಎಸ್‌ಕೆಎಂ), ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಸಿಗುವವರೆಗೂ ಪ್ರತಿಭಟನೆ ಕೈಬಿಡುವುದು ಬೇಡ ಎಂದು ಆಗ್ರಹಿಸಿದೆ. ಆದರೆ ಇದಕ್ಕೆ ಹರಿಯಾಣದ ಭಾಗದ ರೈತರು ಒಪ್ಪುತ್ತಿಲ್ಲ ಎಂದು ಮೂಲಗಳು ತಿಳಿಸಿವೆ. ಆದರೆ ಅನಂತರದ ಚರ್ಚೆಗಳಲ್ಲಿ ರೈತರು ಪ್ರತಿಭಟನೆ ಮುಂದುವರಿಸಲು ಒಪ್ಪಿದ್ದಾರೆ ಎನ್ನಲಾಗಿದೆ.

ಕೇಸ್‌ಗಳು ಹಿಂಪಡೆಯವರೆಗೂ ಪ್ರತಿಭಟನೆ: ಇದೀಗ ತಮ್ಮ ನಿರ್ಧಾರ ಬದಲಿಸಿರುವ ಹರಿಯಾಣ ರೈತರು, ಕೃಷಿ ಕಾಯ್ದೆ ಗಳನ್ನು ವಿರೋಧಿಸಿ ದೇಶಾದ್ಯಂತ ನಡೆಸಲಾಗಿದ್ದ ಪ್ರತಿಭಟನೆಗಳ ಸಂದರ್ಭಗಳಲ್ಲಿ ನಾನಾ ರಾಜ್ಯಗಳಲ್ಲಿ ರೈತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಕೈಬಿಡುವವರೆಗೂ ಪ್ರತಿಭಟನೆ ಮುಂದುವರಿಸಲು ನಿರ್ಧರಿಸಿದ್ದಾರೆ. ಪ್ರತಿಭಟನೆ ಗಳ ವೇಳೆ, ನಾನಾ ರಾಜ್ಯಗಳಲ್ಲಿ ಆಯಾ ರಾಜ್ಯಗಳ ಪೊಲೀಸರು ಹಾಗೂ ರೈಲ್ವೇ ಪೊಲೀಸರಿಂದ ಸುಮಾರು 5,000 ಪ್ರಕರಣಗಳು ದಾಖಲಾಗಿದ್ದು, ಅವೆಲ್ಲವನ್ನೂ ಕೈಬಿಡ ಬೇಕು. ಜತೆಗೆ ಪ್ರತಿಭಟನೆಗಳಲ್ಲಿ ಮೃತರಾದ ರೈತರ ಹತ್ತಿರದ ಸಂಬಂಧಿಕರಿಗೆ ಸೂಕ್ತ ಆರ್ಥಿಕ ಪರಿಹಾರ ಘೋಷಿಸಬೇಕು ಎಂದು  ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next