Advertisement

Politics: ಬರಿಗೈಲಿ ಬಂದ ಅಮಿತ್‌ ಶಾ: ಸಿಎಂ ಸಿದ್ದು

11:24 PM Feb 11, 2024 | Pranav MS |

ಬೆಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿದ್ದ ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ರಾಜ್ಯ ಸರಕಾರದ ಅನೇಕ ಸಚಿವರು ಮುಗಿ ಬಿದ್ದಿದ್ದಾರೆ.

Advertisement

ಕರ್ನಾಟಕದಲ್ಲಿ ಬರಗಾಲ ಘೋಷಣೆಯಾಗಿ ನಾಲ್ಕೈದು ತಿಂಗಳಾ ದರೂ ಎನ್‌ಡಿಆರ್‌ಎಫ್ ಸಮಿತಿ ಅಧ್ಯಕ್ಷರಾಗಿರುವ ಸಚಿವ ಅಮಿತ್‌ ಶಾ ಅವರು ಬರ ಪರಿಹಾರ ಕೊಟ್ಟಿಲ್ಲ. ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬಂದು ಹೋಗುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ರೈತ ಸಂಘಟನೆಗಳ ಮುಖಂಡರೊಂದಿಗೆ ಬಜೆಟ್‌ ಪೂರ್ವ ಭಾವಿ ಸಭೆ ನಡೆಸಿದ ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ಬರಿಗೈಯಲ್ಲಿ ಕರ್ನಾಟಕಕ್ಕೆ ಬಂದಿದ್ದಾರೆ. ಬಡವರು, ರೈತರ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ ಎಂದು ಕಿಡಿ ಕಾರಿದ್ದಾರೆ.

ಅನ್ಯಾಯ ಸಹಿಸಬೇಡಿ
ನಿರ್ಮಲಾ ಸೀತಾರಾಮನ್‌ ಅವರು ತಕ್ಕ ಉತ್ತರ ನೀಡುತ್ತಾರೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಸಂಸತ್ತಿನಲ್ಲಿ ಹೇಳಿದ್ದಾರೆ. ಅವರೀಗ ಬಿಜೆಪಿ ಜತೆಗೆ ಸೇರಿಕೊಂಡಿದ್ದಾರೆ. ಮುಂದಿನ ಜನ್ಮದಲ್ಲಿ ಮುಸ್ಲಿಮರಾಗಿ ಹುಟ್ಟಬೇಕು ಎಂದಿದ್ದ ದೇವೇಗೌಡರು ಈಗ ಏನೇನು ಹೇಳುತ್ತಿದ್ದಾರೆ? ಅವರು ಯಜಮಾನರು. ಮಾಜಿ ಪ್ರಧಾನಿ ಆಗಿದ್ದವರು. ಹೀಗೆಲ್ಲಾ ಹೇಳಬಾರದು. ಬಿಜೆಪಿಯೊಂದಿಗೆ ಮೈತ್ರಿ ಮಾಡಿ ಕೊಂಡಿದ್ದಾರೆ ಎಂಬ ಕಾರಣಕ್ಕೆ ಅವರು ಮಾಡಿದ ಅನ್ಯಾವನ್ನೆಲ್ಲಾ ಸರಿ ಎನ್ನಬಾರದು ಎಂದು ಸಿಎಂ ಹೇಳಿದ್ದಾರೆ.

ಬರ ಪರಿಹಾರ ಘೋಷಿಸಿದರೆ ಅನುಕೂಲ

Advertisement

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಬರ ಪರಿಹಾರಕ್ಕೆ ಮನವಿಯನ್ನು ಸಲ್ಲಿಸಿ ನಾಲ್ಕು ತಿಂಗಳು ಕಳೆದಿದ್ದು, ಕೇಂದ್ರ ಗೃಹ ಸಚಿವರು ರಾಜ್ಯ ಪ್ರವಾಸದಲ್ಲಿರುವ, ಈ ಸಂದರ್ಭದಲ್ಲಿ, ಬರ ಪರಿಹಾರ ಘೋಷಿಸಿದರೆ ರಾಜ್ಯದ ರೈತರಿಗೆ ಬಹಳ ಅನುಕೂಲವಾಗಲಿದೆ ಎಂದು ಹೇಳಿದರು.

ಬರಗಾಲದಿಂದ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ಕೇಂದ್ರ ತಂಡ ಅಧ್ಯಯನ ಮಾಡಿ ವರದಿ ಸಲ್ಲಿಸಿದೆ. ಕೇಂದ್ರದಿಂದ ಪರಿಹಾರ ರೂಪದಲ್ಲಿ ಅಲ್ಪಸ್ವಲ್ಪ ಹಣವಾದರೂ ಬರಬೇಕಿತ್ತು. ಸ್ವಲ್ಪವೂ ಬಂದಿಲ್ಲ. ಯಾವುದಕ್ಕೂ ಕೇಂದ್ರ ಸರಕಾರ ಸ್ಪಂದಿಸುತ್ತಿಲ್ಲ. ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕಾಗುತ್ತಿರುವ ಅನ್ಯಾಯ ವಿರೋಧಿಸಿ ದಿಲ್ಲಿಯಲ್ಲಿ ಪ್ರತಿಭಟಿಸುವ ಸ್ಥಿತಿ ನಿರ್ಮಾಣವಾಗಿದೆ. ಅಮಿತ್‌ ಶಾ ಅವರು ದಿಲ್ಲಿಯಿಂದ ಕರ್ನಾಟಕದವರೆಗೆ ಬಂದರೂ ಪ್ರಯೋಜನವಾಗಿಲ್ಲ.
– ಎಂ.ಬಿ. ಪಾಟೀಲ್‌, ಕೈಗಾರಿಕಾ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next