Advertisement
ಸಂಡೂರಿನ ಸಂಡೂರು ರೆಸಿಡೆನ್ಶಿಯಲ್ ಸ್ಕೂಲ್ ಮೈದಾನದಲ್ಲಿ ಯಾತ್ರೆಗೆ ಬೃಹತ್ ವೇದಿಕೆ ಸಿದ್ದಗೊಂಡಿದೆ.
Related Articles
Advertisement
ಮಧ್ಯಾಹ್ನ 2ರಿಂದ 3.30ರವರೆಗೆ ಬೃಹತ್ ಸಾರ್ವಜನಿಕ ಸಮಾವೇಶ ನಡೆಯಲಿದೆ.
ಕೋರ್ ಕಮಿಟಿ ಸಭೆ: ಸಂಕಲ್ಪ ಯಾತ್ರೆಯಲ್ಲಿ ಬಿಜೆಪಿ ಬಳ್ಳಾರಿ, ವಿಜಯನಗರ ಜಿಲ್ಲಾ ಘಟಕಗಳಿಂದ ಕೇಂದ್ರದ ಗೃಹ ಅಚಿವ ಅಮಿತ್ ಶಾ ಅವರನ್ನು ಬೆಳ್ಳಿ ಗದೆ ನೀಡಿ ಸನ್ಮಾನಿಸಲಾಗುತ್ತದೆ.
ಸಂಕಲ್ಪ ಯಾತ್ರೆ ಬಳಿಕ ಸಂಡೂರಿನಲ್ಲಿ ಖಾಸಗಿ ಹೊಟೇಲ್ ನಲ್ಲಿ ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು ಜಿಲ್ಲೆಗಳ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಪಕ್ಷ ಸಂಘಟನೆ ಕುರಿತು ಮಾತ್ರ ಚರ್ಚೆಗಳು ನಡೆಯಲಿವೆ. ಪಕ್ಷದ ಜಿಲ್ಲಾ ಮುಖಂಡರಿಗೆ ಪಕ್ಷ ಸಂಘಟನೆಗೆ ಟಾಸ್ಕ್ ನೀಡುವ ಸಾಧ್ಯತೆ ಎನ್ನಲಾಗಿದೆ.
ರಾಜ್ಯ ವಿಧಾನಸಭೆ ಚುನಾವಣೆ ನಿಮಿತ್ತ ಮಾ.3 ರಿಂದ ರಾಜ್ಯಾದ್ಯಂತ ನಾಲ್ಕು ತಂಡದಲ್ಲಿ ನಡೆಯಲಿದೆ. ಈ ಕುರಿತು ಜಿಲ್ಲೆಯ ಪ್ರತಿ ಕ್ಷೇತ್ರದ ಸಂಪೂರ್ಣ ಮಾಹಿತಿ ತರುವಂತೆ ಜಿಲ್ಲಾಧ್ಯಕ್ಷರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಸಂಡೂರಿನಲ್ಲಿ ಈ ಬಾರಿ ಗೆಲ್ಲಲೇ ಬೇಕೆಂಬ ಪಣ ತೊಟ್ಟಿರುವ ಬಿಜೆಪಿ, ನಾಲ್ಕು ಜಿಲ್ಲೆಗಳ 22 ಕ್ಷೇತ್ರಗಳಲ್ಲಿ ಕಾಂಗ್ರೆಸ್, ಬಿಜೆಪಿ ತಲಾ 10 ಕ್ಷೇತ್ರ, ಜೆಡಿಎಸ್ 2 ಕ್ಷೇತ್ರಗಳಲ್ಲಿದೆ. ಮುಂದಿನ ಚುನಾವಣೆಯಲ್ಲಿ 22 ಕ್ಷೇತ್ರಗಳಲ್ಲಿ ಕನಿಷ್ಠ 15 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲೇಬೇಕು ಎಂಬ ನಿಟ್ಟಿನಲ್ಲಿ ಟಾಸ್ಕ್ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಇನ್ನು ಜಿಲ್ಲೆಗಳಲ್ಲಿ ಬೂತ್ ಮಟ್ಟದ ಸಮಿತಿ, ಪೇಜ್ ಪ್ರಮುಖ್ ಅಭಿಯಾನಗಳು ಯಾವ ರೀತಿ ನಡೆಯುತ್ತಿದೆ ಎಂಬುದನ್ನು ಪರಿಶೀಲನೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆ ಜನರಿಗೆ ತಿಳಿಸಬೇಕು. ಸರ್ಕಾರದ ಸಾಧನೆ ಪೋಸ್ಟರ್ ಮತ್ತು ಬಾವುಟ ಕಾರ್ಯಕರ್ತರ ಮನೆಗೆ ಅಂಟಿಸಬೇಕು ಸೇರಿದಂತೆ ಹಲವು ಟಾಸ್ಕ್ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.