Advertisement

ಕಾಂಗ್ರೆಸ್ ಕೋಟೆ ಸಂಡೂರಿನಲ್ಲಿ ಬಿಜೆಪಿ ಚಾಣಕ್ಯ ಶಾ ಸಮಾವೇಶ

01:58 PM Feb 23, 2023 | Team Udayavani |

ಬಳ್ಳಾರಿ: ಜಿಲ್ಲೆಯ ಕಾಂಗ್ರೆಸ್ ಅಭೇದ್ಯಕೋಟೆ ಎನಿಸಿರುವ ಸಂಡೂರಲ್ಲಿ ಚುನಾವಣಾ ಚಾಣಕ್ಯ ಅಮಿತ್ ಶಾ ನೇತೃತ್ವದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಕ್ಷಣಗಣನೆ ಆರಂಭವಾಗಿದೆ.

Advertisement

ಸಂಡೂರಿನ ಸಂಡೂರು ರೆಸಿಡೆನ್ಶಿಯಲ್ ಸ್ಕೂಲ್ ಮೈದಾನದಲ್ಲಿ ಯಾತ್ರೆಗೆ ಬೃಹತ್ ವೇದಿಕೆ ಸಿದ್ದಗೊಂಡಿದೆ.

ಮುಖ್ಯ ವೇದಿಕೆಯಲ್ಲಿ ಕೇಂದ್ರದ ಗೃಹ ಸಚಿವ ಅಮಿತ್ ಶಾ, ಪ್ರಹ್ಲಾದ ಜೋಷಿ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು, ಸಚಿವ ಆನಂದ್ ಸಿಂಗ್, ಶಶಿಕಲಾ ಜೊಲ್ಲೆ ಸೇರಿ 34 ಗಣ್ಯರಿಗೆ ಅವಕಾಶ ಕಲ್ಪಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಕ್ಕಾಗಿ ಪಕ್ಕದಲ್ಲೇ ಚಿಕ್ಕ ವೇದಿಕೆಯನ್ನೂ ನಿರ್ಮಿಸಲಾಗಿದ್ದು, ಅದರಲ್ಲಿ ಖ್ಯಾತ ಜನಪದ ಗಾಯಕ ಗುರುರಾಜ್ ಹೊಸಕೋಟೆ ನೇತೃತ್ವದ ತಂಡ ಕನ್ನಡದ ವಿವಿಧ ಚಿತ್ರಗೀತೆಗಳ ಗಾಯನ ಮಾಡಿ ಜನರನ್ನು ರಂಜಿಸಿತು.

ಯಾತ್ರೆಯಲ್ಲಿ ಬಳ್ಳಾರಿ, ವಿಜಯನಗರ ಜಿಲ್ಲೆಗಳ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದ್ದು, ಮಧ್ಯಾಹ್ನ 12 ಗಂಟೆ ಬಳಿಕ ನಿಧಾನವಾಗಿ ತಮಟೆ, ತಾಷಾ ರಾಮ್ ಡೋಲ್ ಬಾರಿಸುತ್ತಾ ಗುಂಪು ಗುಂಪಾಗಿ ಮೈದಾನಕ್ಕೆ ಆಗಮಿಸಿದರು.

ಬಳ್ಳಾರಿ, ವಿಜಯನಗರ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳ ಬಿಜೆಪಿ ಶಾಸಕರು, ಜಿಲ್ಲಾಧ್ಯಕ್ಷರು, ಮುಖಂಡರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಹುಬ್ಬಳ್ಳಿಯಿಂದ ಹೆಲಿಕಾಫ್ಟರ್ ಮೂಲಕ 1.30ಕ್ಕೆ ಸಂಡೂರಿಗೆ ಬರಲಿದ್ದಾರೆ.

Advertisement

ಮಧ್ಯಾಹ್ನ 2ರಿಂದ 3.30ರವರೆಗೆ ಬೃಹತ್ ಸಾರ್ವಜನಿಕ ಸಮಾವೇಶ ನಡೆಯಲಿದೆ.

ಕೋರ್ ಕಮಿಟಿ ಸಭೆ: ಸಂಕಲ್ಪ ಯಾತ್ರೆಯಲ್ಲಿ ಬಿಜೆಪಿ ಬಳ್ಳಾರಿ, ವಿಜಯನಗರ ಜಿಲ್ಲಾ ಘಟಕಗಳಿಂದ ಕೇಂದ್ರದ ಗೃಹ ಅಚಿವ ಅಮಿತ್ ಶಾ ಅವರನ್ನು ಬೆಳ್ಳಿ ಗದೆ ನೀಡಿ ಸನ್ಮಾನಿಸಲಾಗುತ್ತದೆ.

ಸಂಕಲ್ಪ ಯಾತ್ರೆ ಬಳಿಕ ಸಂಡೂರಿನಲ್ಲಿ ಖಾಸಗಿ ಹೊಟೇಲ್ ನಲ್ಲಿ ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು ಜಿಲ್ಲೆಗಳ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಪಕ್ಷ ಸಂಘಟನೆ ಕುರಿತು ಮಾತ್ರ ಚರ್ಚೆಗಳು ನಡೆಯಲಿವೆ. ಪಕ್ಷದ ಜಿಲ್ಲಾ ಮುಖಂಡರಿಗೆ ಪಕ್ಷ ಸಂಘಟನೆಗೆ ಟಾಸ್ಕ್ ನೀಡುವ ಸಾಧ್ಯತೆ ಎನ್ನಲಾಗಿದೆ‌.

ರಾಜ್ಯ ವಿಧಾನಸಭೆ ಚುನಾವಣೆ ನಿಮಿತ್ತ ಮಾ.3 ರಿಂದ ರಾಜ್ಯಾದ್ಯಂತ ನಾಲ್ಕು ತಂಡದಲ್ಲಿ ನಡೆಯಲಿದೆ. ಈ ಕುರಿತು ಜಿಲ್ಲೆಯ ಪ್ರತಿ ಕ್ಷೇತ್ರದ ಸಂಪೂರ್ಣ ಮಾಹಿತಿ ತರುವಂತೆ ಜಿಲ್ಲಾಧ್ಯಕ್ಷರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಸಂಡೂರಿನಲ್ಲಿ ಈ ಬಾರಿ ಗೆಲ್ಲಲೇ ಬೇಕೆಂಬ ಪಣ ತೊಟ್ಟಿರುವ ಬಿಜೆಪಿ, ನಾಲ್ಕು ಜಿಲ್ಲೆಗಳ 22 ಕ್ಷೇತ್ರಗಳಲ್ಲಿ ಕಾಂಗ್ರೆಸ್, ಬಿಜೆಪಿ ತಲಾ 10 ಕ್ಷೇತ್ರ, ಜೆಡಿಎಸ್ 2 ಕ್ಷೇತ್ರಗಳಲ್ಲಿದೆ. ಮುಂದಿನ ಚುನಾವಣೆಯಲ್ಲಿ 22 ಕ್ಷೇತ್ರಗಳಲ್ಲಿ ಕನಿಷ್ಠ 15 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲೇಬೇಕು ಎಂಬ ನಿಟ್ಟಿನಲ್ಲಿ ಟಾಸ್ಕ್ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಇನ್ನು ಜಿಲ್ಲೆಗಳಲ್ಲಿ ಬೂತ್ ಮಟ್ಟದ ಸಮಿತಿ, ಪೇಜ್ ಪ್ರಮುಖ್ ಅಭಿಯಾನಗಳು ಯಾವ ರೀತಿ ನಡೆಯುತ್ತಿದೆ ಎಂಬುದನ್ನು ಪರಿಶೀಲನೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆ ಜನರಿಗೆ ತಿಳಿಸಬೇಕು. ಸರ್ಕಾರದ ಸಾಧನೆ ಪೋಸ್ಟರ್ ಮತ್ತು ಬಾವುಟ ಕಾರ್ಯಕರ್ತರ ಮನೆಗೆ ಅಂಟಿಸಬೇಕು ಸೇರಿದಂತೆ ಹಲವು ಟಾಸ್ಕ್ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next