ನವದೆಹಲಿ: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರ್ಯಾಲಿ ನಡೆಸಲು ಮಹಾರಾಷ್ಟ್ರಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ಅಮಿತ್ ಶಾ ಅವರು ದಿಢೀರ್ ರ್ಯಾಲಿ ರದ್ದುಪಡಿಸಿ ದೆಹಲಿಗೆ ವಾಪಸ್ಸಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಹಾರಾಷ್ಟ್ರದಲ್ಲಿ ನಡೆಯಲಿರುವ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ನಾಲ್ಕು ರ್ಯಾಲಿಗಳು ನಿಗದಿಪಡಿಸಲಾಗಿತ್ತು ಅದರಂತೆ ಕೇಂದ್ರ ಸಚಿವ ಅಮಿತ್ ಶಾ ಮಹಾರಾಷ್ಟ್ರಕ್ಕೆ ಆಗಮಿಸಿದ್ದರು ಆದರೆ ಮಣಿಪುರದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಇಂದು ನಡೆಸಬೇಕಿದ್ದ ರ್ಯಾಲಿಗಳನ್ನು ರದ್ದುಪಡಿಸಿ ದೆಹಲಿಗೆ ವಾಪಸ್ಸಾಗಿದ್ದಾರೆ ಎನ್ನಲಾಗಿದೆ.
ದೆಹಲಿಗೆ ತೆರಳಿದ ಶಾ ಅವರು ಹಿರಿಯ ಅಧಿಕಾರಿಗಳೊಂದಿಗೆ ಈಶಾನ್ಯ ರಾಜ್ಯಗಳ ಪರಿಸ್ಥಿತಿಯ ಕುರಿತು ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.
ಮಣಿಪುರದ ಜಿರಿಬಾಮ್ ನಲ್ಲಿ ಕಳೆದ ಸೋಮವಾರ ಆರು ಮಂದಿ ನಾಪತ್ತೆಯಾಗಿದ್ದರು ಅದರಲ್ಲಿ ಓರ್ವ ಮಹಿಳೆ ಮತ್ತು ಇಬ್ಬರು ಮಕ್ಕಳ ಮೃತದೇಹಗಳು ಪತ್ತೆಯಾಗಿತ್ತು ಇದರಿಂದ ರೊಚ್ಚಿಗೆದ್ದ ಗ್ರಾಮದ ಜನ ಶಾಸಕರ ಮನೆಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದು ಗ್ರಾಮದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣಗೊಂಡಿತ್ತು ಅಲ್ಲದೆ ಉದ್ರಿಕ್ತರ ಗುಂಪು ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರ ಮನೆ ಮೇಲೆ ದಾಳಿ ನಡೆಸಿದೆ ಎನ್ನಲಾಗಿದೆ. ಸದ್ಯ ಇಂಫಾಲದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.
ಇದನ್ನೂ ಓದಿ: Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ