Advertisement

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

11:48 AM Apr 30, 2024 | |

ನವದೆಹಲಿ: ಗೃಹ ಸಚಿವ ಅಮಿತ್ ಶಾ ಅವರ ನಕಲಿ ವಿಡಿಯೋ ವಿಭಿನ್ನ ತಿರುವು ಪಡೆದುಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅಸ್ಸಾಂನ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಜೊತೆಗೆ ಮೂವರು ವಿರೋಧ ಪಕ್ಷದ ನಾಯಕರಿಗೆ ನೋಟಿಸ್ ನೀಡಲಾಗಿದೆ ಎಂದು ಹೇಳಲಾಗಿದೆ.

Advertisement

ದೂರು ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು ಸಮಾಜವಾದಿ ಪಕ್ಷದ ನಾಯಕನ ವಿರುದ್ಧ ನೋಟಿಸ್ ಜಾರಿ ಮಾಡಿದ್ದು. ಅಷ್ಟುಮಾತ್ರವಲ್ಲದೆ ಜಾರ್ಖಂಡ್ ಮತ್ತು ನಾಗಾಲ್ಯಾಂಡ್‌ನ ಇಬ್ಬರು ಕಾಂಗ್ರೆಸ್ ನಾಯಕರಿಗೆ ನೋಟಿಸ್ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು. ದೆಹಲಿ ಪೊಲೀಸರ ವಿವಿಧ ತಂಡಗಳು ಜಾರ್ಖಂಡ್, ರಾಜಸ್ಥಾನ, ಉತ್ತರ ಪ್ರದೇಶ, ಮಧ್ಯಪ್ರದೇಶ, ಹರಿಯಾಣ ಮತ್ತು ನಾಗಾಲ್ಯಾಂಡ್‌ಗೆ ತೆರಳಿ ನಕಲಿ ವೀಡಿಯೋ ಬಗ್ಗೆ ತನಿಖೆಯನ್ನು ನಡೆಸುತ್ತಿವೆ.

ಇದನ್ನೂ ಓದಿ: Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Advertisement

Udayavani is now on Telegram. Click here to join our channel and stay updated with the latest news.

Next