ಅಮಿತ್ ಶಾ ತೀವ್ರ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗಿದೆ. ಬಿಜೆಪಿ ಭದ್ರಕೋಟೆಯಾಗಿದ್ದ ಜಯನಗರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು ಹೇಗೆ? ಚುನಾವಣೆ ಉಸ್ತುವಾರಿ ವಹಿಸಿಕೊಂಡಿದ್ದ ನಾಯಕರು ಸರಿಯಾಗಿ ಕೆಲಸ ಮಾಡಿಲ್ಲವೇ ಎಂದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.
Advertisement
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಜನಾದೇಶಕ್ಕೆ ವಿರುದಟಛಿ ಎಂದು ಹೇಳಿಕೊಳ್ಳಲು ರಾಜರಾಜೇಶ್ವರಿ ನಗರ ಹಾಗೂಜಯನಗರ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಬೇಕಿತ್ತು. ಆದರೆ, ಎರಡೂ ಕಡೆ ಕಾಂಗ್ರೆಸ್ ಗೆದ್ದಿದೆ. ಬಿಜೆಪಿಗೆ ಇದ್ದ ಉತ್ತಮ ಅವಕಾಶ ಕಳೆದುಕೊಳ್ಳಲಾಗಿದೆ. ಸೋಲಿಗೆ ಕಾರಣ ಏನು ಎಂಬುದರ ಬಗ್ಗೆ ವರದಿ ನೀಡಿ ಎಂದು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಸೂಚಿಸಿದ್ದಾರೆಂದು ಹೇಳಲಾಗಿದೆ. ಬಿಜೆಪಿ ಅತಿ ಹೆಚ್ಚು ಸ್ಥಾನ ಪಡೆದರೂ ಸರ್ಕಾರ ರಚನೆ ಸಾಧ್ಯವಾಗಿಲ್ಲ. ರಾಜ್ಯ ನಾಯಕರು ಒಗ್ಗಟ್ಟಾಗಿ ಕಾರ್ಯತಂತ್ರ ರೂಪಿಸಿದ್ದರೆ ಸರ್ಕಾರ ರಚಿಸಬಹುದಾಗಿತ್ತು. ಅದಾದ ನಂತರವೂ ಸಮ್ಮಿಶ್ರ ಸರ್ಕಾರದ ವಿರುದಟಛಿ ಹೋರಾಟ ನಡೆಸುತ್ತಿಲ್ಲ ಯಾಕೆ ಎಂದು ಅಮಿತ್ ಶಾ ತಮ್ಮನ್ನು ಸಂಪರ್ಕಿಸಿದ ರಾಜ್ಯ ನಾಯಕರನ್ನು ಪ್ರಶ್ನಿಸಿದ್ದಾರೆ ಎಂದು ಹೇಳಲಾಗಿದೆ.