Advertisement

ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಭೇಟಿಯಾದ ಅಮಿತ್ ಶಾ

09:47 PM Sep 05, 2022 | Team Udayavani |

ಮುಂಬಯಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಖ್ಯಾತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ರೋಹಿತ್ ಶೆಟ್ಟಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

Advertisement

“ಸಿಂಗಮ್”, “ಸಿಂಬಾ” ಮತ್ತು “ಸೂರ್ಯವಂಶಿ” ಯಂತಹ ಚಲನಚಿತ್ರಗಳಿಗೆ ಹೆಸರುವಾಸಿಯಾದ ನಿರ್ದೇಶಕರೊಂದಿಗಿನ ಭೇಟಿಯ ಫೋಟೋವನ್ನು ಶಾ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

“ಪ್ರಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಅವರನ್ನು ಇಂದು ಮುಂಬೈನಲ್ಲಿ ಭೇಟಿಯಾದೆ” ಎಂದು ಮಹಾರಾಷ್ಟ್ರ ರಾಜಧಾನಿಗೆ ಎರಡು ದಿನಗಳ ಭೇಟಿಯಲ್ಲಿರುವ ಗೃಹ ಸಚಿವ ಶಾ ಟ್ವೀಟ್ ಮಾಡಿದ್ದಾರೆ. ಶೆಟ್ಟಿ ಅವರು ಶಾ ಅವರೊಂದಿಗಿನ ಭೇಟಿಯ ಫೋಟೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ ಮತ್ತು “ನಮ್ಮ ಗೌರವಾನ್ವಿತ ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಜಿ ಅವರನ್ನು ಭೇಟಿಯಾಗಲು ನನಗೆ ಗೌರವವಿದೆ” ಎಂದು ಬರೆದಿದ್ದಾರೆ.

ಇಬ್ಬರೂ ತಮ್ಮ ಭೇಟಿಯ ಯಾವುದೇ ವಿವರಗಳನ್ನು ಬಹಿರಂಗಪಡಿಸಲಿಲ್ಲ.ಕಳೆದ ತಿಂಗಳು, ಶಾ ಅವರು ಹೈದರಾಬಾದ್‌ಗೆ ಭೇಟಿ ನೀಡಿದಾಗ ಸ್ಟಾರ್ ನಟ ಜೂನಿಯರ್ ಎನ್ ಟಿಆರ್ ಅವರನ್ನು ಭೇಟಿ ಮಾಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next