Advertisement

ಮೋದಿ, ಶಾ ಮಾತುಕತೆ; ದೇಶದಲ್ಲಿ ಇನ್ನೂ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ?

08:10 PM May 29, 2020 | Nagendra Trasi |

ನವದೆಹಲಿ: ಕೋವಿಡ್ 19 ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್ ಮುಂದುವರಿಕೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಲೋಕ್ ಕಲ್ಯಾಣ್ ಮಾರ್ಗದಲ್ಲಿರುವ ಪ್ರಧಾನಿ ನಿವಾಸಕ್ಕೆ ತೆರಳಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದಾಗಿ ವರದಿ ತಿಳಿಸಿದೆ.

Advertisement

ಮೂಲಗಳ ಪ್ರಕಾರ, ದೇಶದಲ್ಲಿನ ಕೋವಿಡ್ 19 ಪರಿಸ್ಥಿತಿ ಕುರಿತ ವಿಚಾರವನ್ನು ಪ್ರಧಾನಿ ಮೋದಿ ಅವರ ಬಳಿ ಶಾ ಅವರು ಚರ್ಚಿಸಿದ್ದು, ಮುಂದೆ ತೆಗೆದುಕೊಳ್ಳಬೇಕಾದ ನಿರ್ಧಾರದ ಬಗ್ಗೆ ಮಾತುಕತೆ ನಡೆಸಿರುವುದಾಗಿ ವರದಿ ವಿವರಿಸಿದೆ.

ಮೂಲಗಳ ಮಾಹಿತಿಯನ್ನು ನಂಬುವ ಪ್ರಕಾರ, ಕೇಂದ್ರ ಸರ್ಕಾರ ದೇಶದಲ್ಲಿ ಇನ್ನೂ ಎರಡು ವಾರಗಳ ಕಾಲ ಲಾಕ್ ಡೌನ್ ಮುಂದುವರಿಸುವ ಸಾಧ್ಯತೆ ಇದೆ ಎಂದು ಹೇಳಿದೆ. ದೇಶಾದ್ಯಂತ ನಾಲ್ಕನೇ ಹಂತದ ಲಾಕ್ ಡೌನ್ ಮೇ 31ರಂದು ಕೊನೆಗೊಳ್ಳಲಿದೆ. ಕೋವಿಡ್ 19 ತಡೆಗಟ್ಟಲು ದೇಶಾದ್ಯಂತ ಮಾರ್ಚ್ 25ರಿಂದ ಲಾಕ್ ಡೌನ್ ಆರಂಭವಾಗಿತ್ತು.

ಕೋವಿಡ್ 19 ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಶಾ ಈಗಾಗಲೇ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ಮಾಹಿತಿ ಪಡೆದಿದ್ದರು. ಅಲ್ಲದೇ ಕೆಲವು ರಾಜ್ಯಗಳಲ್ಲಿ ಕೋವಿಡ್ 19 ವೈರಸ್ ಪ್ರಕರಣ ತೀವ್ರಗತಿಯಲ್ಲಿ ಏರುತ್ತಿರುವ ಬಗ್ಗೆ ಹೆಚ್ಚಿನ ಕಳವಳ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next