ಅಹಮದಾಬಾದ್: ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದರೆ ಭೂಪೇಂದ್ರ ಪಟೇಲ್ ಗುಜರಾತ್ ಮುಖ್ಯಮಂತ್ರಿಯಾಗಿ ಉಳಿಯುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಹಮದಾಬಾದ್ ನಲ್ಲಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ತವರು ರಾಜ್ಯದಲ್ಲಿ ಸತತ ಏಳನೇ ಬಾರಿಗೆ ಗದ್ದುಗೆ ಮೇಲೆ ಕಣ್ಣಿಟ್ಟಿರುವ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿದೆ.
“ಗುಜರಾತ್‌ನಲ್ಲಿ ಬಿಜೆಪಿ ಬಹುಮತ ಪಡೆದರೆ, ಭೂಪೇಂದ್ರ ಪಟೇಲ್ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ” ಎಂದು ಸಿಎನ್‌ಎನ್-ನ್ಯೂಸ್ 18 ಗೆ ಅಮಿತ್ ಶಾ ತಿಳಿಸಿದರು.
ಇದನ್ನೂ ಓದಿ:ನಮಗೆ ‘ಮೇಡ್ ಇನ್ ಇಂಡಿಯಾ’ ಬೇಕು, ‘ಮೇಡ್ ಇನ್ ಚೈನಾ’ ಅಲ್ಲ: ಕೇಂದ್ರದ ವಿರುದ್ಧ ರಾಹುಲ್ ಟೀಕೆ
Related Articles
ಭೂಪೇಂದ್ರ ಪಟೇಲ್ ಅವರು 2021ರಲ್ಲಿ ಗುಜರಾತ್ ಸಿಎಂ ಆಗಿ ನೇಮಕಗೊಂಡಿದ್ದರು. ಅವರು ಘಟ್ಲೋಡಿಯಾ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿದ್ದಾರೆ. 2021ರ ಸೆಪ್ಟೆಂಬರ್ ನಲ್ಲಿ ಅಚ್ಚರಿಯ ಬೆಳವಣಿಗೆಯಲ್ಲಿ ಬಿಜೆಪಿಯು ಆಗ ಸಿಎಂ ಆಗಿದ್ದ ವಿಜಯ್ ರೂಪಾಣಿ ಅವರನ್ನು ಬದಲಾಯಿಸಿ ಭೂಪೇಂದ್ರ ಪಟೇಲ್ ಅವರನ್ನು ಸಿಎಂ ಆಗಿ ನೇಮಿಸಿತ್ತು.
ಈ ಹಿಂದೆ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು ಇಸುದನ್ ಗಧ್ವಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿತ್ತು. ಆದರೆ ಕಾಂಗ್ರೆಸ್ ಮಾತ್ರ ಸಿಎಂ ಅಭ್ಯರ್ಥಿಯನ್ನು ಘೋಷಿಸದಿರಲು ನಿರ್ಧರಿಸಿದೆ.