Advertisement

ಜಮ್ಮು ಮತ್ತು ಕಾಶ್ಮೀರದ ಸರ್ವತೋಮುಖ ಅಭಿವೃದ್ಧಿಗೆ ಮೋದಿ ಸರ್ಕಾರದ ಮೊದಲ ಆದ್ಯತೆ : ಶಾ

07:00 PM Jun 18, 2021 | Team Udayavani |

ನವ ದೆಹಲಿ : ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿ ಯೋಜನೆಗಳ ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.

Advertisement

ಸಭೆಯ ಅಧ್ಯಕ್ಷತೆ ವಹಿಸಿ ಮಾತಾಡಿದ ಶಾ, “ಜಮ್ಮು ಮತ್ತು ಕಾಶ್ಮೀರದ ಜನರ ಸರ್ವತೋಮುಖ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೊದಲ ಆದ್ಯತೆಯಾಗಿದೆ” ಎಂದು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಶೇಕಡಾ 76 ರಷ್ಟು ಲಸಿಕೆ ನೀಡಲಾಗಿದ್ದು ಹಾಗೂ ಕೇಂದ್ರಾಡಳಿತ ಪ್ರದೇಶದ ನಾಲ್ಕು ಜಿಲ್ಲೆಗಳಲ್ಲಿ ಶೇಕಡಾ 100 ರಷ್ಟು ಲಸಿಕೆಯನ್ನು ಜನರನ್ನು ನೀಡಿರುವುದಕ್ಕೆ  ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಅಭಿನಂದಿಸಿದರು.

ಇದನ್ನೂ ಓದಿ : ನಕಲಿ ಕೋವಿಡ್ 19 ಲಸಿಕೆ ಶಿಬಿರದ ಹಗರಣ ಪ್ರಕರಣ; ನಾಲ್ವರನ್ನು ಬಂಧಿಸಿದ ಮುಂಬೈ ಪೊಲೀಸ್

ಇನ್ನು, ಪಿ ಎಂ ಕಿಸಾನ್ ಯೋಜನೆ, ಕಿಸಾನ್ ಕ್ರೆಡಿಟ್ ಕಾರ್ಡ್ ಮತ್ತು ಇತರ ರೈತ ಸ್ನೇಹಿ ಯೋಜನೆಗಳ ಪ್ರಯೋಜನಗಳನ್ನು ಜಮ್ಮು ಮತ್ತು ಕಾಶ್ಮೀರಿ ರೈತರು ಪಡೆದುಕೊಳ್ಳುವಂತೆ ಕೇಂದ್ರ ಗೃಹ ಸಚಿವರು ಅಧಿಕಾರಿಗಳನ್ನು ಸೂಚಿಸಿದರು. ಕೈಗಾರಿಕಾ ನೀತಿಯ ಪ್ರಯೋಜನಗಳು ಸಣ್ಣ-ಪ್ರಮಾಣದ ಕೈಗಾರಿಕೆಗಳಿಗೆ ತಲುಪುವಂತೆ ನೋಡಿಕೊಳ್ಳಬೇಕೆಂದು ಅವರು ಅಧಿಕಾರಿಗಳನ್ನು ಆದೇಶಿಸಿದ್ದಾರೆ.

Advertisement

ನಿರಾಶ್ರಿತರಿಗೆ ಸಾಧ್ಯವಾದಷ್ಟು ಬೇಗ ನಿರಾಶ್ರಿತರ ಪ್ಯಾಕೇಜ್‌ ನ ಪ್ರಯೋಜನಗಳು ಸಿಗುವಂತೆ ನೋಡಿಕೊಳ್ಳಬೇಕು. ಕೃಷಿಯನ್ನು ಉತ್ತೇಜಿಸುವುದು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳನ್ನು ಸ್ಥಾಪಿಸುವುದು ಸಹ ಸಭೆಯ ಪ್ರಮುಖ ಅಂಶಗಳಾಗಿವೆ.

ಅಮಿತ್ ಶಾ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಎನ್‌ ಎಸ್‌ ಎ ಅಜಿತ್ ದೋವಲ್, ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ಗುಪ್ತಚರ ಬ್ಯೂರೋ ನಿರ್ದೇಶಕ ಅರವಿಂದ್ ಕುಮಾರ್, ಆರ್ & ಎಡಬ್ಲ್ಯೂ ಮುಖ್ಯಸ್ಥ ಸಮಂತ್ ಕುಮಾರ್ ಗೋಯೆಲ್, ಸಿಆರ್‌ಪಿಎಫ್ ಮಹಾನಿರ್ದೇಶಕ ಕುಲದೀಪ್ ಸಿಂಗ್ ಮತ್ತು ಜಮ್ಮು ಮತ್ತು ಕಾ‍ಶ್ಮೀರದ ಡಿಜಿಪಿ ದಿಲ್‌ಬಾಗ್ ಸಿಂಗ್ ಭಾಗವಹಿಸಿದ್ದರು.

ಇದನ್ನೂ ಓದಿ : ಕೋವಿಡ್ ಸೋಂಕಿನ 2ನೇ ಅಲೆಯಿಂದಾಗಿ  2 ಲಕ್ಷ ಕೋಟಿ ರೂ. ಉತ್ಪಾದನಾ ನಷ್ಟ : ಆರ್ ಬಿ ಐ

Advertisement

Udayavani is now on Telegram. Click here to join our channel and stay updated with the latest news.

Next