ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುವ ವ್ಯವಸ್ಥೆಯ ವಿರುದ್ಧ ಶೂನ್ಯ ಸಹನೆ ನೀತಿ ಅನುಸರಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಉಗ್ರರಿಗೆ ಸಹಾಯ ಮಾಡುವ ಮತ್ತು ಪ್ರೋತ್ಸಾಹಿಸುವ ವ್ಯವಸ್ಥೆಯನ್ನು ಸಂಪೂರ್ಣ ಬುಡಮೇಲು ಮಾಡಬೇಕಿದೆ ಎಂದೂ ಅವರು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತೆಗೆ ಸಂಬಂಧಿಸಿದಂತೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹಾಗೂ ಗೃಹ ಸಚಿವಾ ಲಯ, ಗುಪ್ತಚರ ಇಲಾಖೆ, ಅರೆಸೇನಾ ಪಡೆ ಮತ್ತು ರಾಜ್ಯ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಜಮ್ಮು ಮತ್ತು ಕಾಶ್ಮೀರದ ನಾಗರಿಕರ ಉತ್ತಮ ಜೀವನ ಮತ್ತು ಭವಿಷ್ಯಕ್ಕಾಗಿ ಭಯೋತ್ಪಾನೆಯ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿ ಅನುಸರಿಸುವಂತೆ ಇದೇ ವೇಳೆ ಶಾ ಅಧಿಕಾರಿಗಳಿಗೆ ಸೂಚಿಸಿದರು. ರಾಜ್ಯದಲ್ಲಿ ಭದ್ರತೆ ಕುರಿತು ಕೈಗೊಂಡಿರುವ ವಿವಿಧ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
“ಪ್ರತ್ಯೇಕವಾದಿ ಮನಸ್ಥಿತಿಯನ್ನು ಬೆಂಬಲಿಸುವ ಹಾಗೂ ಭಯೋತ್ಪಾದನೆ ಪ್ರೋತ್ಸಾಹಿಸುವ ಪರಿಸರ ವ್ಯವಸ್ಥೆಯನ್ನು ಸಂಪೂರ್ಣವಾಗಿ ಬುಡಮೇಲು ಮಾಡಬೇಕಿದೆ. ಇದು ಸಾಮಾನ್ಯರ ಒಳತಿಗಾಗಿ ಅಗತ್ಯವಿದೆ,’ ಎಂದು ಅಮಿತ್ ಶಾ ಪ್ರತಿಪಾದಿಸಿದರು. ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಯೋಜ ನೆಯ ಪ್ರಗತಿಯನ್ನು ಪರಿಶೀಲಿಸಿದರು.
ಹೊಸದಿಲ್ಲಿ ಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ನಡೆಸಿದರು. ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಇದ್ದಾರೆ.