ಹೊಸದಿಲ್ಲಿ: ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ದೇಶಾದ್ಯಂತ ವಿಸ್ತರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪುನರುಚ್ಚರಿಸಿದ್ದಾರೆ.
ಯಾವುದೇ ಧರ್ಮವನ್ನು ಲೆಕ್ಕಿಸದೆ ಎಲ್ಲ ನಾಗರಿಕರು ಈ ಪ್ರಕ್ರಿಯೆಯ ಭಾಗವಾಗಲಿ¨ªಾರೆ. ಮುಂಬರುವ 2024ರ ಚುನಾವಣೆಗಿಂತ ಮೊದಲು ದೇಶದಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಇದರಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ಅವರು ಹೇಳಿದ್ದಾರೆ. ಪೌರತ್ವ ತಿದ್ದುಪಡಿ ಮಸೂದೆಗಿಂತ ಇದು ಭಿನ್ನವಾಗಿದೆ. ಹೀಗಾಗಿ ರಾಷ್ಟ್ರಾದ್ಯಂತ ಎನ್‌ಆರ್‌ಸಿಯನ್ನು ವಿಸ್ತರಿಸಲಾಗುವುದು ಎಂದಿದ್ಧಾರೆ. ಎನ್‌ಆರ್‌ಸಿಗೆ ಯಾವುದೇ ನಿಬಂಧನೆಗಳಿಲ್ಲ, ಯಾವುದೇ ಧರ್ಮಗಳು ಬರುವುದಿಲ್ಲ. ಭಾರತದ ಎಲ್ಲ ನಾಗರಿಕರು, ಧರ್ಮವನ್ನು ಲೆಕ್ಕಿಸದೆ ಪಟ್ಟಿಯಲ್ಲಿ ಸ್ಥಾನ ಪಡೆದುಕೊಳ್ಳುತ್ತಾರೆ.
ಕರಡು ಪಟ್ಟಿಯಲ್ಲಿ ಯಾರ ಹೆಸರು ಕಾಣಿಸಿಕೊಂಡಿಲ್ಲವೋ ಅವರು ನ್ಯಾಯಾಲಯದ ಮೊರೆ ಹೋಗುವ ಹಕ್ಕನ್ನು ಹೊಂದಿ¨ªಾರೆ ಎಂದು ಇದೇ ವೇಳೆ ಶಾ ಹೇಳಿದ್ದಾರೆ.
ಅಸ್ಸಾಂನಲ್ಲಿ ಎನ್‌ಆರ್‌ಸಿ ಕುರಿತು ಗೊಂದಲ ಉಂಟಾಗಿದ್ದು, ನವೀಕರಿಸಿದ ಅಂತಿಮ ಎನ್‌ಆರ್‌ಸಿ ಪಟ್ಟಿಯಲ್ಲಿ 19 ಲಕ್ಷಕ್ಕೂ ಅಧಿಕ ಅರ್ಜಿದಾರರನ್ನು ಕೈ ಬಿಡಲಾಗಿದೆ ಎಂದು ಆರೋಪಿಸಲಾಗಿದೆ.
ಅಕ್ರಮವಾಗಿ ವಲಸೆ ಬಂದವರನ್ನು ಪ್ರಮುಖವಾಗಿ ಮಾರ್ಚ್ 25, 1971ರಂದು ಬಾಂಗ್ಲಾದೇಶದಿಂದ ಅಸ್ಸಾಂಗೆ ಪ್ರವೇಶಿಸಿ, ಇಲ್ಲಿಯೇ ನೆಲೆಸಿದ್ದರು. ಅಂತಹವರನ್ನು ಅವರ ದೇಶಕ್ಕೆ ಗಡಿಪಾರು ಮಾಡುವ ಉದ್ದೇಶವನ್ನು ಈ ನೂತನ ಎನ್‌ಆರ್‌ಸಿ ಹೊಂದಿದೆ.