Advertisement

ಕಾಶ್ಮೀರದ ಇಂದಿನ ಸ್ಥಿತಿಗೆ ನೆಹರು ಮತ್ತು ಕಾಂಗ್ರೆಸ್ ಪಕ್ಷವೇ ಕಾರಣ: ಶಾ ವಾಗ್ದಾಳಿ

09:46 AM Jun 29, 2019 | Nagendra Trasi |

ನವದೆಹಲಿ:ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರ ನೀತಿಯೇ ಜಮ್ಮು-ಕಾಶ್ಮೀರದಲ್ಲಿನ ಸಮಸ್ಯೆಗೆ ಮುಖ್ಯವಾದ ಕಾರಣ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಶುಕ್ರವಾರ ಕಾಂಗ್ರೆಸ್ ವಿರುದ್ಧ ಕಟು ಟೀಕಾಪ್ರಹಾರ ನಡೆಸಿದರು.

Advertisement

ಲೋಕಸಭೆಯಲ್ಲಿ ಮಾತನಾಡಿದ ಅವರು, ನಾವು ಇಂದು ಸಾಕಷ್ಟು ಭಯೋತ್ಪಾದನೆಯನ್ನು ಎದುರಿಸುತ್ತಿದ್ದೇವೆ. ಅದಕ್ಕೆ ಕಾರಣ ಕಾಂಗ್ರೆಸ್ ಮತ್ತು ಜವಾಹರಲಾಲ್ ನೆಹರು ಅವರ ತಪ್ಪು ನಿರ್ಧಾರ ಎಂದು ವಾಗ್ದಾಳಿ ನಡೆಸಿದರು.

ಈ ತಪ್ಪನ್ನು ಮಾಡಿದ್ದು ಯಾರು ಅಂತ ನಾನು(ಕಾಂಗ್ರೆಸ್) ನಿಮ್ಮನ್ನು ಪ್ರಶ್ನಿಸುತ್ತೇನೆ. ಜವಾಹರಲಾಲ್ ನೆಹರು ಆ ತಪ್ಪನ್ನು ಮಾಡಿದ್ದು, ಪಿಓಕೆಯನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟರು. ನೀವು ಈಗ ಹೇಳುತ್ತೀರಿ ನಾವು ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದಿಲ್ಲ ಎಂಬುದಾಗಿ. ಆದರೆ ಅಂದು ಗೃಹ ಸಚಿವ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ನೆಹರು ಅವರು ಇಬ್ಭಾಗದ ಕೆಲಸ ಮಾಡಿಬಿಟ್ಟಿದ್ದರು ಎಂದು ಚಾಟಿ ಬೀಸಿದರು.

Advertisement

Udayavani is now on Telegram. Click here to join our channel and stay updated with the latest news.

Next