ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಕಳೆದ ಒಂದು ವಾರದ ಬೆಳವಣಿಗೆಗೆ ಸೋಮವಾರ ತೆರೆ ಬಿದ್ದಿದ್ದು, ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಿರುವುದಾಗಿ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.
ಶಾ ಹೇಳಿದ್ದೇನು?
ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಲಾಗಿದೆ. 370ನೇ ವಿಧಿಯನ್ನು ಹಾಗೂ 35ಎ ಅನ್ನು ಕೂಡಾ ರದ್ದುಪಡಿಸಲಾಗಿದೆ ಎಂದು ಅಮಿತ್ ಶಾ ಲೋಕಸಭೆಯ ಉಭಯ ಕಲಾಪವನ್ನು ಉದ್ದೇಶಿಸಿ ಘೋಷಣೆ ಮಾಡಿದ್ದಾರೆ.
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿರುವ ಆರ್ಟಿಕಲ್ 370ನೇ ವಿಧಿಯನ್ನು ಸಂವಿಧಾನಬದ್ಧವಾಗಿ ರದ್ದುಗೊಳಿಸಿದ್ದು, ಇದಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹಿ ಹಾಕಿರುವುದಾಗಿ ರಾಜ್ಯಸಭೆಯಲ್ಲಿ ತಿಳಿಸಿದರು.
ಸೋಮವಾರ ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಮಹತ್ವದ ಸಭೆ ನಡೆದಿತ್ತು. ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಭಾಗವಹಿಸಿದ್ದರು.