Advertisement

31ರಂದು ಬೆಂಗಳೂರಿಗೆ ಅಮಿತ್‌ ಶಾ

06:15 AM Dec 27, 2017 | Harsha Rao |

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಸಿದಟಛಿತೆ ಕೈಗೊಳ್ಳುವುದರ ಜತೆಗೆ ತಂತ್ರಗಾರಿಕೆ ರೂಪಿಸುವ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಡಿ. 31ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.
ಮೊದಲ ಹಂತದಲ್ಲಿ ಚುನಾವಣೆಗಾಗಿ ರಾಜ್ಯಮಟ್ಟದಲ್ಲಿ ಆಗಬೇಕಾದತಂತ್ರಗಾರಿಕೆ ಬಗ್ಗೆ ಚರ್ಚಿಸಲು ಅಮಿತ್‌ ಶಾ ಅವರು ಒಂದು ದಿನದ ಭೇಟಿ ಕೈಗೊಂಡಿದ್ದು, ನಂತರದಲ್ಲಿ ಆಗಾಗೆÂ ಭೇಟಿ ನೀಡುವ ಮತ್ತು ರಾಜ್ಯದಲ್ಲೇ ಮೊಕ್ಕಾಂ ಹೂಡಲಿದ್ದಾರೆ.

Advertisement

ಡಿ. 31ರಂದು ಬೆಳಗ್ಗೆ ಬೆಂಗಳೂರಿಗೆ ಆಗಮಿಸಲಿರುವ ಅಮಿತ್‌ ಶಾ, ಮೊದಲು ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸದಸ್ಯರೊಂದಿಗೆ ಸಭೆ ನಡೆಸಲಿದ್ದಾರೆ. ಇದಾದ ಬಳಿಕ ಬಿಜೆಪಿ ಲೋಕಸಭೆ ಸದಸ್ಯರು, ರಾಜ್ಯಸಭೆ ಸದಸ್ಯರು, ಶಾಸಕರು,
ವಿಧಾನ ಪರಿಷತ್‌ ಸದಸ್ಯರು ಮತ್ತು ಪ್ರಮುಖ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ, ಈಗಾಗಲೇ ವಹಿಸಿದ್ದ ಜವಾಬ್ದಾರಿಯ ಮರುಪರಿಶೀಲ ನಾ ಕಾರ್ಯ ಮಾಡಲಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ನಿವಾಸದಲ್ಲಿ ಮಂಗಳವಾರ ನಡೆದ ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸಭೆ
ಯಲ್ಲಿ ಅಮಿತ್‌ ಶಾ ರಾಜ್ಯ ಭೇಟಿ ಕುರಿತಂತೆ ಸುದೀರ್ಘ‌ ಸಮಾಲೋಚ ನೆ ನಡೆಸಿ ಅದಕ್ಕೆ ಸಂಬಂಧಿಸಿದಂತೆ ಸಿದಟಛಿತೆಗಳನ್ನು ಕೈಗೊಳ್ಳಲು ನಿರ್ಧರಿಸಲಾಯಿತು.

ಕಳೆದ ಆಗಸ್ಟ್‌ನಲ್ಲಿ ರಾಜ್ಯಕ್ಕೆ 3 ದಿನಗಳ ಭೇಟಿ ನೀಡಿದ್ದ ಅಮಿತ್‌ ಶಾ ಪಕ್ಷದ ಕೋರ್‌ ಕಮಿಟಿ ಸದಸ್ಯರು, ಪದಾಧಿಕಾರಿಗಳು ಮತ್ತು ಸಂಸದರು, ಶಾಸಕರಿಗೆ ಕೆಲವು ಕಾರ್ಯ ಭಾರಗಳನ್ನು ವಹಿಸಿದ್ದರು. ತಮ್ಮ ಮುಂದಿನ ಭೇಟಿ ಸಂದರ್ಭದಲ್ಲಿ
ವಹಿಸಿದ ಜವಾಬ್ದಾರಿಯನ್ನು ಯಾವ ರೀತಿ ನಿಭಾಯಿಸಲಾಗಿದೆ ಎಂಬ ಬಗ್ಗೆ ಪ್ರಗತಿ ವರದಿ ನೀಡುವಂತೆ ಸೂಚಿಸಿದ್ದರು. ಅದರಂತೆ ಪ್ರಗತಿ ಪರಿಶೀಲನೆಗೆ ಆಗಮಿಸುತ್ತಿದ್ದಾರೆ.

ಈ ಹಿಂದಿನ ಭೇಟಿ ಸಂದರ್ಭದಲ್ಲಿ ಶಾ ಅವರು ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರಿಗೆ ತಲಾ ಎರಡು ವಿಧಾನಸಭಾ ಕ್ಷೇತ್ರಗಳು, ವಿಧಾನಸಭೆ ಸದಸ್ಯರಿಗೆ ತಮ್ಮ ಕ್ಷೇತ್ರ ಸೇರಿ ಎರಡು ಕ್ಷೇತ್ರಗಳು ಹಾಗೂ ವಿಧಾನ ಪರಿಷತ್‌ ಸದಸ್ಯರು ಮತ್ತು ಹಿರಿಯ ಪದಾಧಿಕಾರಿಗಳಿಗೆ ತಲಾ ಒಂದು ಕ್ಷೇತ್ರದ ಜವಾಬ್ದಾರಿ ವಹಿಸಿ ಅಲ್ಲಿ ಪಕ್ಷ ಸಂಘಟನೆ ಕುರಿತಂತೆ ಕೆಲಸ ಮಾಡಲು ಸೂಚಿಸಿದ್ದರು. ಅದರಂತೆ ಸಂಸದರು, ಶಾಸಕರು ವಹಿಸಿದ ಜವಾಬ್ದಾರಿಯನ್ನು ಯಾವ ರೀತಿ ನಿರ್ವಹಿಸಿದ್ದಾರೆ ಎಂಬುದನ್ನು
31ರಂದು ಪರಿಶೀಲಿಸಲಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next