Advertisement

ಜಮ್ಮ, ಕಾಶ್ಮೀರದ ಅಭಿವೃದ್ಧಿ ಯೋಜನೆಗಳ ಬಗ್ಗೆ ಶಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ..!

04:56 PM Jun 18, 2021 | Team Udayavani |

ನವ ದೆಹಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಯೋಜನೆಗಳ ಸ್ಥಿತಿಗತಿಗಳನ್ನು ಪರಿಶೀಲಿಸಲು ಗೃಹ ಸಚಿವ ಅಮಿತ್ ಶಾ ಇಂದು(ಶುಕ್ರವಾರ, ಜೂನ್ 18) ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಸಭೆಯಲ್ಲಿ ಅಮಿತ್ ಶಾ ಅವರು ಕೇಂದ್ರಾಡಳಿತ ಪ್ರದೇಶಕ್ಕೆ ಅನುಕೂಲವಾಗುವ ಉದ್ದೇಶದಿಂದ ಹೊಸ ಯೋಜನೆಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿಸಿದೆ.

ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಸಭೆಯಲ್ಲಿ ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಮುಖ್ಯ ಕಾರ್ಯದರ್ಶಿ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಇದನ್ನೂ ಓದಿ : ಕೆಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಹೊರಕೇರಿ ಅವಿರೋಧ ಆಯ್ಕೆ

ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕೆ ಅಭಿವೃದ್ಧಿ ಯೋಜನೆಗಳ ಬಗ್ಗೆ ನಿಗಾ ಇಟ್ಟಿದ್ದಾರೆ, ಇದರಿಂದ ಅವುಗಳು ಸಮಯಕ್ಕೆ ಪೂರ್ಣಗೊಳ್ಳುತ್ತವೆ ಎಂದು ಅಧಿಕಾರಿ ಮೂಲಗಳು ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಇಂಡಿಯಾ ಟುಡೆ ವರದಿ ಮಾಡಿದೆ.

Advertisement

ಹೊಸದಾಗಿ ರೂಪುಗೊಂಡ ಕೇಂದ್ರಾಡಳಿತ ಪ್ರದೇಶದಲ್ಲಿ ವ್ಯಾಪಾರವನ್ನು ಹೇಗೆ ಹೆಚ್ಚಿಸಬಹುದು ಎಂಬುದರ ಬಗ್ಗೆಯೂ ಸರ್ಕಾರದ ಗಮನ ಹರಿಸಲಿದೆ ಎಂದು ಹೇಳಲಾಗಿದೆ.

ಇನ್ನು, ಹೆದ್ದಾರಿಗಳ ನಿರ್ಮಾಣ, ನೀರು ಸರಬರಾಜು ಮತ್ತು ಪ್ರವಾಹ ಸಂರಕ್ಷಣಾ ಯೋಜನೆಗಳು, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುದ್ದೀಕರಣ, ವಸತಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಆರೋಗ್ಯ ಮತ್ತು ಶಿಕ್ಷಣ ವ್ಯವಸ್ಥೆಯ ಬೆಳವಣಿಗೆಗೆ ವಿಶೇಷ ಯೋಜನೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ : ತನ್ನ ಉತ್ಪನ್ನಗಳ ಬಿಡಿ ಭಾಗಗಳ ‘ಡೋರ್ ಡೆಲಿವರಿ’ಗೆ ಮುಂದಾದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್

Advertisement

Udayavani is now on Telegram. Click here to join our channel and stay updated with the latest news.

Next